ನವದೆಹಲಿ(ಸೆ.20): ಬಿಜೆಪಿಯ ಮೆಹ್ರೋಲಿ ಜಿಲ್ಲಾ ಘಟಕದ ಅಧ್ಯಕ್ಷ ಆಜಾದ್ ಸಿಂಗ್, ಪಕ್ಷದ ಸಭೆಯಲ್ಲೇ ತಮ್ಮ ಪತ್ನಿ ಮೇಲೆ ಹಲ್ಲೆ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆ ರಣತಂತ್ರದ ಕುರಿತು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿದ್ದರು. ಸಭೆಯ ಬಳಿಕ ಕೇಂದ್ರ ಸಚಿವರು ತೆರಳುತ್ತಿದ್ದಂತೇ ಆಜಾದ್ ಸಿಂಗ್ ದಕ್ಷಿಣ ದೆಹಲಿಯ ಮಾಜಿ ಮೇಯರ್ ಆಗಿದ್ದ ತಮ್ಮ ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾರೆ.

ಆಜಾದ್ ಸಿಂಗ್ ತಮ್ಮ ಪತ್ನಿಯಿಂದ ವಿಚ್ಛೇದನ ಬಯಸಿದ್ದು, ಈ ಹಿನ್ನೆಲೆಯಲ್ಲಿ ಪಕ್ಷದ ಸಭೆಯಲ್ಲೇ ಆಜಾದ್ ತಮ್ಮ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ, ಹೆಣ್ಣಿನ ಮೇಲಿನ ದೌರ್ಜನ್ಯವನ್ನು ಪಕ್ಷ ಎಂದೂ ಸಹಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಘಟನೆಯ ಕುರಿತು ಪಕ್ಷ ಆಂತರಿಕ ತನಿಖೆ ನಡೆಸಲಿದ್ದು, ಆಜಾದ್ ಸಿಂಗ್ ತಪ್ಪಿತಸ್ಥ ಎಂದು ಕಂಡು ಬಂದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿವಾರಿ ಭರವಸೆ ನೀಡಿದ್ದಾರೆ.