ಉತ್ತರ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬಂದಿರುವ ‘ಆ್ಯ0ಟಿ-ರೋಮಿಯೋ’ ದಳಗಳು ಉದ್ದೇಶಪೂರ್ವಕವಾಗಿ ಕೆಲ ಸಮುದಾಯಗಳ ವಿರುದ್ಧ ಕಾರ್ಯಾಚರಿಸುತ್ತಿವೆ ಎಂದು ಲೋಕಸಭೆಯ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸಂಸದ ರಂಜೀತ್ ರಂಜನ್ ಪ್ರಸ್ತಾಪಿಸಿದ್ದಾರೆ.
ನವದೆಹಲಿ (ಮಾ.23): ಉತ್ತರ ಪ್ರದೇಶದಲ್ಲಿ ಕೆಲ ಸಮುದಾಯಗಳ ವಿರುದ್ಧ ತಾರತಮ್ಯ ಮಾಡಲಾಗುತ್ತಿದೆ ಎಂಬ ವಿಚಾರವನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಲ್ಲಗಳೆದಿದ್ದಾರೆ.
ಉತ್ತರ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬಂದಿರುವ ‘ಆ್ಯ0ಟಿ-ರೋಮಿಯೋ’ ದಳಗಳು ಉದ್ದೇಶಪೂರ್ವಕವಾಗಿ ಕೆಲ ಸಮುದಾಯಗಳ ವಿರುದ್ಧ ಕಾರ್ಯಾಚರಿಸುತ್ತಿವೆ ಎಂದು ಲೋಕಸಭೆಯ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸಂಸದ ರಂಜೀತ್ ರಂಜನ್ ಪ್ರಸ್ತಾಪಿಸಿದ್ದಾರೆ.
ಅದಕ್ಕೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ಬಿಜೆಪಿ ಸರ್ಕಾರವು ಎಂದಿಗೂ ಜಾತಿ, ಧರ್ಮಗಳ ಆಧಾರದಲ್ಲಿ ತಾರತಮ್ಯ ಮಾಡುವುದಿಲ್ಲವೆಂದು ಹೇಳಿದ್ದಾರೆ.
ಹೆಣ್ಮಕ್ಕಳನ್ನು ಚುಡಾಯಿಸುವುದನ್ನು ತಡೆಗಟ್ಟಲು ಉತ್ತರ ಪ್ರದೇಶ ಸರ್ಕಾರವು ಪೊಲೀಸ್ ಇಲಾಖೆಯಿಂದಲೇ ‘ಆ್ಯ0ಟಿ ರೋಮಿಯೋ’ ದಳಗಳನ್ನು ಆರಂಭಿಸಿದೆ.