ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಭಾವಿಸಲಾದ ಮೂರು ರಾಜ್ಯಗಳಲ್ಲಿ ಶೀಘ್ರದಲ್ಲೇ ಚುನಾವಣೆ ನಡೆಯಲಿದ್ದು ಈ ಸಂಬಂಧ ಬಿಜೆಪಿ ಮುಖಂಡರು ಸಭೆ ಸೇರಿ ಗೆಲುವಿಗಾಗಿ ಮಾಸ್ಟರ್ ಪ್ಲಾನ್ ಮಾಡಲು ಸಿದ್ಧರಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ತಿಂಗಳ ಆರಂಭದಲ್ಲೇ ಬಿಜೆಪಿ ನಾಯಕರು ಸಭೆ ಸೇರಲಿದ್ದಾರೆ.
ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೆ.8-9ರಂದು ಇಲ್ಲಿ ನಡೆಯಲಿದೆ. ವರ್ಷಾಂತ್ಯದಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಡ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವವನ್ನು ಪಡೆದಿದೆ.
ದೇಶಾದ್ಯಂತ ಹಿರಿಯ ಮುಖಂಡರನ್ನೊಳಗೊಂಡ ಪಕ್ಷದ ಕಾರ್ಯಕಾರಿಣಿ ಸಭೆ ಆ.18-19ರಂದು ನಡೆಯಬೇಕಿತ್ತು. ಆದರೆ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನದಿಂದಾಗಿ ಸಭೆ ಮುಂದೂಡಲ್ಪಟ್ಟಿತ್ತು.
ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಭಾವಿಸಲಾದ ಬಿಜೆಪಿ ಅಧಿಕಾರದಲ್ಲಿರುವ ಮೂರು ಪ್ರಮುಖ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ, ಪಕ್ಷಕ್ಕೆ ಈ ಸಭೆ ಮಹತ್ವದ್ದಾಗಿದೆ.
