ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಪರಿಷತ್ ವಿಪಕ್ಷ ನಾಯಕ ಕೆ.ಎಸ್ .ಈಶ್ವರಪ್ಪ, ಅನಂತಕುಮಾರ್, ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರಿಗೆ ದೆಹಲಿಗೆ ಬರುವಂತೆ ದೂರವಾಣಿ ಕರೆ ಮಾಡಿ ತಿಳಿಸಲಾಗಿದೆ.

ಬೆಂಗಳೂರು (ಜ.25): ರಾಯಣ್ಣ ಬ್ರಿಗೇಡ್ ಸಂಬಂಧ ಬಿಜೆಪಿಯಲ್ಲಿ ಭಿನ್ನಮತ ತಾರಕ್ಕೇರಿದೆ. ಹೀಗಾಗಿ ಮಧ್ಯಪ್ರವೇಶಿಸಿರುವ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಬುಲಾವ್ ನೀಡಿದೆ.

ಜನವರಿ 27 ರಂದು ಶುಕ್ರವಾರ ದೆಹಲಿಗೆ ಆಗಮಿಸುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ವರಿಷ್ಠರು ಬುಲಾವ್ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಪರಿಷತ್ ವಿಪಕ್ಷ ನಾಯಕ ಕೆ.ಎಸ್ .ಈಶ್ವರಪ್ಪ, ಅನಂತಕುಮಾರ್, ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರಿಗೆ ದೆಹಲಿಗೆ ಬರುವಂತೆ ದೂರವಾಣಿ ಕರೆ ಮಾಡಿ ತಿಳಿಸಲಾಗಿದೆ.

ಸಂಜೆ 6 ಗಂಟೆಗೆ ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ನಿವಾಸದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಬ್ರಿಗೇಡ್ ವಿಚಾರದಲ್ಲಿ ಯಡಿಯೂರಪ್ಪ ಹಾಗೂ ಈಶ್ವರಪ್ಪ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಕುರಿತು ಚರ್ಚಿಸಲಿದ್ದಾರೆ.