ಚೀನಾ ವಿಚಾರದಲ್ಲಿ ಪ್ರಧಾನಿ ಮೋದಿ ಮೌನವಾಗಿದ್ದಾರೆಂದು ಟೀಕಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬಿಜೆಪಿ ತಿರುಗೇಟು ನೀಡಿದೆ. ಕೇಂದ್ರ ಸರ್ಕಾರವು, ದೇಶದ ಸಾರ್ವಭೌಮತೆ, ಸುರಕ್ಷತೆ  ಹಾಗೂ ಮಹತ್ವದ ವಿಚಾರಗಳಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲವೆಂದು ಬಿಜೆಪಿ ಹೇಳಿದೆ.

ನವದೆಹಲಿ (ಜು. 08): ಚೀನಾ ವಿಚಾರದಲ್ಲಿ ಪ್ರಧಾನಿ ಮೋದಿ ಮೌನವಾಗಿದ್ದಾರೆಂದು ಟೀಕಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬಿಜೆಪಿ ತಿರುಗೇಟು ನೀಡಿದೆ.

ಕೇಂದ್ರ ಸರ್ಕಾರವು, ದೇಶದ ಸಾರ್ವಭೌಮತೆ, ಸುರಕ್ಷತೆ ಹಾಗೂ ಮಹತ್ವದ ವಿಚಾರಗಳಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲವೆಂದು ಬಿಜೆಪಿ ಹೇಳಿದೆ.

ರಾಹುಲ್ ಗಾಂಧಿಯವರು ವಿದೇಶದಿಂದ ಈಗಷ್ಟೇ ಹಿಂತಿರುಗಿದ್ದಾರೆ. ಆದುದರಿಂದ ಅಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮೋದಿ ನಾಯಕತ್ವದಲ್ಲಿ ದೇಶದ ಸಾರ್ವಭೌಮತೆ, ಸುರಕ್ಷತೆ ಹಾಗೂ ಮಹತ್ವದ ವಿಚಾರಗಳಲ್ಲಿ ಸರ್ಕಾರವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ, ಎಂದು ಬಿಜೆಪಿ ನಾಯಕ ನಳಿನ್ ಕೊಹ್ಲಿ ಹೇಳಿದ್ದಾರೆ.

ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಚೀನಾ ವಿಚಾರದಲ್ಲಿ ಪ್ರಧಾನಿ ಮೋದಿ ಏಕೆ ಮೌನವಹಿಸಿದ್ದಾರೆ ಎಂದು ನಿನ್ನೆ ರಾಹುಲ್ ಗಾಂಧಿ ಪ್ರಶ್ನಿಸಿದ್ದರು.