ಬಿಜೆಪಿ ಕಚೇರಿಗೆ ಬಾಂಬ್: ಮೈಸೂರಿಂದ ಬೆದರಿಕೆ ಕರೆ| ಇದು ಕಿಡಿಗೇಡಿಯ ಕೃತ್ಯ: ಪೊಲೀಸರು| ಕರ್ನಾಟಕ ಪೊಲೀಸರಿಗೆ ಮಾಹಿತಿ ರವಾನೆ
ನವದೆಹಲಿ[ಜೂ.23]: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯನ್ನು ಸ್ಫೋಟಿಸುವುದಾಗಿ ಮೈಸೂರಿನಿಂದ ಕರೆ ಮಾಡಿ ವ್ಯಕ್ತಿಯೊಬ್ಬರು ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಪ್ರಾಥಮಿಕ ತನಿಖೆ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದೆ.
ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಶನಿವಾರ ಹುಸಿಬಾಂಬ್ ಕರೆಯೊಂದು ಬಂದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಕರೆ ಕರ್ನಾಟಕದ ಮೈಸೂರಿನಿಂದ ಬಂದಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರಿನ ಯಾರೋ ಕಿಡಿಗೇಡಿ ಈ ಕರೆ ಮಾಡಿದ್ದಾನೆ. ಪ್ರಾಥಮಿಕ ತನಿಖೆ ಬಳಿಕ ಇದೊಂದು ಹುಸಿ ಕರೆ ಎಂಬುದು ಗೊತ್ತಾಗಿದೆ. ಹುಸಿ ಬಾಂಬ್ ಬೆದರಿಕೆ ಕುರಿತು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರು ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ವಿವರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆದರಿಕೆ ಕರೆ ಬಂದ ಬೆನ್ನಲ್ಲೇ ದೆಹಲಿ ಪೊಲೀಸರು ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ತೆರಳಿ, ಮಾಹಿತಿ ಕಲೆಹಾಕಿದ್ದಾರೆ.
