ಅಧಿಕಾರ ಹಿಡಿಯಲು ಆಪರೇಷನ್ ಕಮಲ ನಡೆಸುತ್ತಿದೆ ಬಿಜೆಪಿ?

BJP is trying to come power by operation kamala says D K Shivakumar
Highlights

ಕಾಂಗ್ರೆಸ್-ಜೆಡಿಎಸ್ ಸರಕಾರ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದೆ. ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿಕೊಂಡು ತಿರುಗುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಕಾರವನ್ನು ಹಳಿಗೆ ತರಲು ಯತ್ನಿಸುತ್ತಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ನಡೆಯುತ್ತಿದ್ದು, ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದೆ. ಇದನ್ನು ಖುದ್ದು ಡಿಕೆಶಿ ಒಪ್ಪಿಕೊಂಡಿದ್ದಾರೆ.

ರಾಮನಗರ: ಅಧಿಕಾರ ಹಿಡಿಯುವಲ್ಲಿ ವಿಫಲವಾದ ಬಿಜೆಪಿ ಸುಮ್ಮನೆ ಕುಳಿತಿಲ್ಲ. ಏನಾದರೂ ಮಾಡಿ, ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. ಆಪರೇಷನ್ ಕಮಲ ನಡೆಸಲು ಹೊಂಚು ಹಾಕುತ್ತಿದೆ!

ಎಸ್. ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರೇ ಆಪರೇಷನ್ ಕಮಲದ ಮುನ್ಸೂಚನೆ ನೀಡಿದ್ದಾರೆ. ಮಂಗಳವಾರ ರಾಮನಗರ ಜಿಲ್ಲೆಯ ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಹೋದರ ಡಿ.ಕೆ.ಸುರೇಶ್ ಅಭ್ಯರ್ಥಿಯಾಗಲಿದ್ದಾರೆಂದು ಹೇಳಿದ್ದಾರೆ. 

ಸಿದ್ದರಾಮಯ್ಯ ಸಿಡಿಸಿದ ಸ್ಫೋಟಕ ಬಾಂಬ್!

'ಐಟಿ ದಾಳಿ ಹಿನ್ನಲೆ ಜೈಲಿಗೆ ಹೋಗಲು ನಾನು ಸಿದ್ಧ. ತಪ್ಪು ಮಾಡಿದರೆ ಮಾತ್ರ ಹೆದರಬೇಕು. ನಾನು ತಪ್ಪೇ ಮಾಡಿಲ್ಲ, ಏಕೆ ಹೆದರಲಿ? ಹೆದರಿಸಿ ಬೆದರಿಸಿ ನಮ್ಮನ್ನೂ ಏನು ಮಾಡಲೂ ಸಾಧ್ಯವಿಲ್ಲ. ನನ್ನ ಮೇಲೆ ರಾಜಕೀಯ ಪ್ರೇರಿತ ದಾಳಿ ನಡೆಯುತ್ತಿದೆ.ಅದ್ಯಾವುದಕ್ಕೂ ನಾವು ಹೆದರುವವರಲ್ಲ. ಪ್ರೀತಿ ವಿಶ್ವಾಸದಿಂದ ಮಾತ್ರ ಗೆಲ್ಲಲು ಮಾತ್ರ ಸಾಧ್ಯ,' ಎಂದಿದ್ದಾರೆ.

loader