ದೀಪಕ್ ರಾವ್ ಹತ್ಯೆಯ ಹಿಂದೆ ಸ್ಥಳೀಯ ಬಿಜೆಪಿ ಕಾರ್ಪೋರೇಟರ್ ಒಬ್ಬರ ಕೈವಾಡ ಇರುವುದಾಗಿ ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಮಂಗಳೂರು ಉತ್ತರ ಬಿಜೆಪಿ ಅಧ್ಯಕ್ಷ ಡಾ.ವೈ.ಭರತ್ ಶೆಟ್ಟಿ ಎಂಬವರು ₹1 ಕೋಟಿ ಮೊತ್ತದ ಮಾನನಷ್ಟ ಕೇಸ್ ದಾಖಲಿಸಿದ್ದಾರೆ.

ಮಂಗಳೂರು(ಜ.10): ಇತ್ತೀಚೆಗೆ ಹತ್ಯೆಯಾದ ದೀಪಕ್ ರಾವ್ ಸಾವಿನಲ್ಲಿ ಸ್ಥಳೀಯ ಬಿಜೆಪಿ ನಾಯಕರ ಪಾತ್ರವಿದೆ ಎಂದು ಆರೋಪಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಮಂಗಳೂರು ನ್ಯಾಯಾಲಯದಲ್ಲಿ 1 ಕೋಟಿ ರು. ಮೊತ್ತದ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ದೀಪಕ್ ರಾವ್ ಹತ್ಯೆಯ ಹಿಂದೆ ಸ್ಥಳೀಯ ಬಿಜೆಪಿ ಕಾರ್ಪೋರೇಟರ್ ಒಬ್ಬರ ಕೈವಾಡ ಇರುವುದಾಗಿ ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಮಂಗಳೂರು ಉತ್ತರ ಬಿಜೆಪಿ ಅಧ್ಯಕ್ಷ ಡಾ.ವೈ.ಭರತ್ ಶೆಟ್ಟಿ ಎಂಬವರು ₹1 ಕೋಟಿ ಮೊತ್ತದ ಮಾನನಷ್ಟ ಕೇಸ್ ದಾಖಲಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಪಿಗಳ ಜೊತೆಗೆ ಬಿಜೆಪಿಗೆ ಸಂಪರ್ಕ ಇದೆ ಎಂದಿರುವ ಶಾಸಕ ಮೊಯ್ದಿನ್ ಬಾವಾ ವಿರುದ್ಧವೂ ಮೊಕದ್ದಮೆ ದಾಖಲಿಸಲು ಪರಿಶೀಲಿಸಲಾಗುತ್ತಿದೆ ಎಂದರು.