ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ಮರು ಆಯ್ಕೆ ಬಯಸಿದ್ದರು

ಬೆಂಗಳೂರು[ಜೂ.18]: ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಬಿ.ಜೆ.ಪುಟ್ಟಸ್ವಾಮಿ ರಾಜೀನಾಮೆ ನೀಡಿದ್ದಾರೆ. 

ವಿಧಾನ ಪರಿಷತ್ತಿಗೆ ಮರು ಆಯ್ಕೆ ಮಾಡದ ಹಿನ್ನಲೆಯಲ್ಲಿ ಬೇಸರಗೊಂಡು ರಾಜೀನಾಮೆ ನೀಡಿದ್ದಾರೆ. ಪಕ್ಷದ ಹಿರಿಯ ನಾಯಕರು ಕೊಟ್ಟ ಭರವಸೆಯಂತೆ ನಡೆದುಕೊಂಡಿಲ್ಲ ಎಂದಿರುವ ಪುಟ್ಟಸ್ವಾಮಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಮುನಿಸಿಕೊಂಡಿದ್ದಾರೆ.

ಪುಟ್ಟಸ್ವಾಮಿ ಅವರು ಬಿಜೆಪಿಯ ಹಿಂದುಳಿದ ವರ್ಗಗಳ ಪ್ರಮುಖ ನಾಯಕರಾಗಿದ್ದರು. ಪರಿಷತ್ ಸದಸ್ಯರಾಗಿದ್ದ ಅವರು ಮರು ಆಯ್ಕೆ ಬಯಸಿದ್ದರು. ಆದರೆ ಪಕ್ಷವು ಈ ಬಾರಿ ಬಹುತೇಕ ಹೊಸ ಮುಖಗಳಿಗೆ ಆದ್ಯತೆ ನೀಡಿತ್ತು.

Scroll to load tweet…