ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು  ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರಂತರವಾಗಿ ರಾಜಕೀಯ ಚಟುವಟಿಕೆ ಹಾಗೂ ಚುನಾವಣೆಯಿಂದ ಬಳಲಿದ ಬಿಎಸ್ ವೈ ಇದೀಗ ಆಸ್ಪತ್ರೆಯಲ್ಲಿ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ. 

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರು ಹೊರವಲಯದ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದಾರೆ.

ನಿನ್ನೆ ಸಂಜೆ ಜಿಂದಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಒಟ್ಟು ಐದು ದಿನಗಳ ಕಾಲ ಇಲ್ಲಿ ಚಿಕಿತ್ಸೆ ಪಡೆದುಕೊಂಡು ವಿಶ್ರಾಂತಿ ಪಡೆಯಲಿದ್ದಾರೆ. 

ಪ್ರತಿ ವರ್ಷ ಜಿಂದಾಲ್ ಗೆ ದಾಖಲಾಗಿ ಪ್ರಕೃತಿ ಚಿಕಿತ್ಸೆ ಪಡೆಯುವ ಬಿ.ಎಸ್.ಯಡಿಯೂರಪ್ಪ ಈ ವರ್ಷವೂ ಕೂಡ ಇಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 

ಚುನಾವಣೆ ಹಾಗೂ ರಾಜಕಾರಣದಿಂದ ನಿರಂತರವಾಗಿ ಬಳಲಿದ ಅವರು ಜುಲೈ 29 ರವರೆಗೆ ಪ್ರಕೃತಿ ಚಿಕಿತ್ಸಾಲಯದಲ್ಲಿ ವಿವಿಧ ಚಿಕಿತ್ಸೆಗಳನ್ನು ಪಡೆದುಕೊಂಡು ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ.