ಸರ್ಕಾರಕ್ಕೆ ಕಾದಿದೆಯಾ ಕಂಟಕ ? 'ಆಗಸ್ಟ್ ಅಂತ್ಯದೊಳಗೆ ತಿಳಿಯುತ್ತೆ ಭವಿಷ್ಯ'

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 19, Jul 2018, 3:28 PM IST
BJP Leader BSY Slams Karnataka Govt
Highlights

ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಮಾಡಿಕೊಂಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಕೆಲವು ಅಸಮಾಧಾನಗಳು ಕಾಣಿಸುತ್ತಿದೆ. ಆಗಸ್ಟ್ ಅಂತ್ಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಯಡಿಯೂರಪ್ಪ ಹೇಳಿದ್ದಾರೆ. 

ಶಿವಮೊಗ್ಗ: ರಾಜ್ಯದಲ್ಲಿ ಅಧಿಕಾರದಲ್ಲಿರುವ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಆಡಳಿತ ನೀಡುತ್ತದೆಂಬ ಲಕ್ಷಣಗಳು ಕಾಣಿಸುತ್ತಿಲ್ಲವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. 

ಆಗಸ್ಟ್ ಅಂತ್ಯದೊಳಗೆ ಏನು ಬೇಕಾದರೂ ಆಗಬಹುದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಎಲ್ಲ ಬೆಳವಣಿಗೆಯನ್ನು ಶಾಂತ ರೀತಿಯಾಗಿ ಗಮನಿಸುತ್ತಿದ್ದೇವೆ ಎಂದಿದ್ದಾರೆ. 

 ಜು.27 ರಂದು ಸಂಭವಿಸಲಿರುವ ಗ್ರಹಣಕಾಲದಲ್ಲಿ ಯಾವುದೇ ಶುಭ ಕಾರ್ಯ ಮಾಡಬೇಡಿ ಎಂದು ವಿಧಾನಸಭೆಯ ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ. 

loader