ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುಳಾ ನಾಗರಾಜು ಅವರ ಕಾರು ಅಪಘಾತಕ್ಕೆ ಈಡಾಗಿದೆ.
ತುಮಕೂರು : ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುಳಾ ನಾಗರಾಜು ಅವರ ಕಾರು ಅಪಘಾತಕ್ಕೆ ಈಡಾಗಿದೆ.
ಗೋಡೆಕೆರೆಯಲ್ಲಿ ಪ್ರಚಾರ ಮುಗಿಸಿಕೊಂಡು ಚಿಕ್ಕನಾಯಕನಹಳ್ಳಿಗೆ ಬರುವಾಗ ಘಟನೆ ಸಂಭವಿಸಿದೆ. ಮಂಜುಳಾ ನಾಗರಾಜ್ ಕಾರಿಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಅಪಘಾತದಲ್ಲಿ ಮಂಜುಳಾ ಕಾಲಿಗೆ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
