ನವದೆಹಲಿ[ಜು.20] : ಆಂತರಿಕ ಚುನಾವಣೆಗೆ ಸಜ್ಜಾಗುತ್ತಿರುವ ಬಿಜೆಪಿ, ಈ ಪ್ರಕ್ರಿಯೆಯ ಉಸ್ತುವಾರಿ ನೋಡಿಕೊಳ್ಳಲು ಸಮಿತಿಯೊಂದನ್ನು ರಚನೆ ಮಾಡಿದೆ. 

ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇಮಕ ಮಾಡಿರುವ ಈ ಸಮಿತಿಯಲ್ಲಿ ಶಾಸಕ ಸಿ.ಟಿ. ರವಿ ಕೂಡ ಸ್ಥಾನ ಪಡೆದಿದ್ದಾರೆ. 

ಕೇಂದ್ರದ ಮಾಜಿ ಕೃಷಿ ಸಚಿವ ರಾಧಾ ಮೋಹನ ಸಿಂಗ್ ಅವರು ಈ ಉಸ್ತುವಾರಿ ಸಮಿತಿಯ ಮುಖ್ಯಸ್ಥರಾಗಿದ್ದಾರೆ.