ಕೋಲ್ಕತಾ [ಅ.28]:  ಮತ್ತೆ ಪಶ್ಚಿಮ ಬಂಗಾಳದಲ್ಲಿ ನೆತ್ತರು ಹರಿದಿದ್ದು, ಬಿಜೆಪಿ ಮುಖಂಡನ ಹತ್ಯೆಯಾಗಿದೆ. 

ಹೂಗ್ಲಿ ಜಿಲ್ಲೆಯ ಆರಾಮ್ಬಾಗ್ ಪ್ರದೇಶದಲ್ಲಿ ಶೇಖ್ ಅಮಿರ್ ಖಾನ್ ಎಂಬ ಬಿಜೆಪಿ ಮುಖಂಡನನ್ನು ಹತ್ಯೆ ಮಾಲಾಗಿದ್ದು,  ಇದರ ಹಿಂದೆ ಟಿಎಂಸಿ ಕೈವಾಡವಿದೆ ಎಂದು ಆರೋಪಿಸಲಾಗಿದೆ. 

ಅಮಿರ್ ಶೇಖ್ ಮೇಲೆ ಹಲ್ಲೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. 

ಈಗಾಗಲೇ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಇದರ ಹಿಂದೆ ಪೊಲೀಸರ ನಿರ್ಲಕ್ಷ್ಯವೂ ಇದೆ ಎಂದು ಆರೋಪಿಸಲಾಗಿದೆ. 

ಬಿಜೆಪಿಯವರು ಸಂಪರ್ಕ ಮಾಡಿದ್ದಾರೆ: ಕಾಂಗ್ರೆಸ್ ನಾಯಕನ ಮಾತೃ ಪಕ್ಷಕ್ಕೆ ಘರ್ ವಾಪಸಿ ಮಾತು...

ಇನ್ನು ಬಿಜೆಪಿ ಮುಖಂಡರ ಹತ್ಯೆ ಖಂಡಿಸಿ  ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದು, ಈ ಕೃತ್ಯದ ಹಿಂದಿರುವವರು ಬಂಧಿಸಲು ಆಗ್ರಹಿಸಿದ್ದಾರೆ.

ಆರ್ ಎಸ್ ಎಸ್ ಕಾರ್ಯಕರ್ತನ ಕುಟುಂಬದ ಹತ್ಯೆ :  ಕೆಲ ದಿನಗಳ ಹಿಂದಷ್ಟೇ ಪಶ್ಚಿಮ ಬಂಗಾಳದ ಮುರ್ಷಿದಾಬಾದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತ ಆತನ ಪುಟ್ಟ ಪುತ್ರ ಹಾಗೂ  8 ತಿಂಗಳ ಗರ್ಭಿಣಿಯನ್ನು ಹತ್ಯೆ ಮಾಡಲಾಗಿತ್ತು. 

ಇಡೀ ಕುಟುಂಬವನ್ನೇ ಕೊಲೆ ಮಾಡಿದ್ದು, ಇದಾದ ಕೆಲವೇ ದಿನಗಳಲ್ಲಿ ಇದೀಗ ಮತ್ತೊಂದು ದುಷ್ಕೃತ್ಯವಾಗಿದೆ. 

ಈ ಹಿಂದೆಯೂ ಪಶ್ಚಿಮ ಬಂಗಾಳದಲ್ಲಿ ಅನೇಕ ಬಿಜೆಪಿ ಮುಖಂಡರನ್ನು ನಡು ರಸ್ತೆಗಳಲ್ಲಿಯೇ ಕೊಚ್ಚಿ ಕೊಂದ ಘಟನೆಗಳು ನಡೆದಿದ್ದು, ಇದೀಗ ಮತ್ತೊಮ್ಮೆ ಬಿಜೆಪಿ ಮುಖಂಡನನ್ನು ಭೀಕರವಾಗಿ ಕೊಲೆಗೈಯ್ಯಲಾಗಿದೆ.