ಬಿಜೆಪಿ ಮುಖಂಡನ ಬರ್ಬರ ಹತ್ಯೆ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 29, Jul 2018, 11:21 AM IST
BJP leader killed in West Bengal
Highlights

 ಬಿಜೆಪಿ ಮುಖಂಡನೋರ್ವನನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ಡೈಮಂಡ್ ಹಾರ್ಬರ್(ಪಶ್ಚಿಮ ಬಂಗಾಳ): ಇಲ್ಲಿನ ಸ್ಥಳೀಯ ಬಿಜೆಪಿ ಮುಖಂಡನೋರ್ವನನ್ನು ಅಪರಿಚಿತ ದುಷ್ಕರ್ಮಿಗಳು ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಹತ್ಯೆ ಮಾಡಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ಹತ್ಯೆಗೀಡಾದ ಬಿಜೆಪಿ ಮುಖಂಡನನ್ನು ಶಕ್ತಿಪಾದ ಸರ್ದಾರ್(45) ಎಂದು ಗುರುತಿಸಲಾಗಿದೆ. ಈ ನಡುವೆ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಗೂಂಡಾಗಳೇ ಬಿಜೆಪಿ ಮುಖಂಡನನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಕಾರ್ಯಕರ್ತರು ಮಂದಿರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸಿದರು. 

loader