ಶಿವಮೊಗ್ಗ : ಮಾಜಿ ಉಪ ಮುಖ್ಯಮಂತ್ರಿ ಬಿಜೆಪಿ ನಾಯಕರ ಕೆ.ಎಸ್ ಈಶ್ವರಪ್ಪ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಎಡಗೈ ಉಳುಕಿರುವ ಕಾರಣ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಸದ್ಯ ಮೊಣಕೈ ನಲ್ಲಿ ಬಾವು ಹಿನ್ನೆಲೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದು, ಈಶ್ವರಪ್ಪ ಅವರಿಗೆ ನಾಲ್ಕು ದಿನಗಳ ಕಾಲ ವಿಶ್ವಾಂತಿಗೆ ಸೂಚಿಸಲಾಗಿದೆ. 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಸೇರಿದಂತೆ ಹಲವು ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಬಿಜೆಪಿ ನಾಯಕ ಈಶ್ವರಪ್ಪ ಅವರು ಸದ್ಯ ಕೈ ನೋವಿನ ಕಾರಣ ಚಿಕಿತ್ಸೆ ಪಡೆದುಕೊಂಡಿದ್ದಾರೆ.