ಬಿಜೆಪಿ ಶಾಸಕರು ತಮ್ಮ ಪಕ್ಷವನ್ನು ತೊರೆದು ಇದೀಗ ಅಧಿಕೃತವಾಗಿ ಕಾಂಗ್ರೆಸ್ ಸೆರ್ಪಡೆಯಾಗಿದ್ದಾರೆ. 

ನವದೆಹಲಿ: ಡಿಸೆಂಬರ್‌ನಲ್ಲಿ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಬೆನ್ನಲ್ಲೇ, ಬಿಜೆಪಿಯ ಹಿರಿಯ ನಾಯಕ ಜಸ್ವಂತ್‌ ಸಿಂಗ್‌ ಅವರ ಪುತ್ರ, ಬಿಜೆಪಿ ಶಾಸಕ ಮಾನವೇಂದ್ರ ಸಿಂಗ್‌ ಅವರು ಬುಧವಾರ ಕಾಂಗ್ರೆಸ್‌ ಸೇರ್ಪಡೆಯಾದರು. 

ಇದರಿಂದ ರಜಪೂತ ಮತಗಳು ಕಾಂಗ್ರೆಸ್‌ ಕಡೆ ವಾಲಲಿದ್ದು, ರಾಜಸ್ಥಾನ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

 ಪಕ್ಷ ಸೇರ್ಪಡೆಗೂ ಮುನ್ನ ಮಾನವೇಂದ್ರ ಸಿಂಗ್‌ ಅವರು ಹಿರಿಯ ಕಾಂಗ್ರೆಸ್ಸಿಗರಾದ ಅಶೋಕ್‌ ಗೆಹ್ಲೋಟ್‌, ಸಚಿನ್‌ ಪೈಲಟ್‌, ಅವಿನಾಶ್‌ ಪಾಂಡೆ ಹಾಗೂ ರಣದೀಪ್‌ ಸುರ್ಜೇವಾಲ ಅವರ ಸಮ್ಮುಖದಲ್ಲಿ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದರು.