ಯಾವುದೇ ಕ್ಷಣದಲ್ಲಿ ಸರ್ಕಾರ ಪತನ ಸಾಧ್ಯತೆ..?

First Published 9, Jul 2018, 9:45 AM IST
BJP Leader Sadananda Gowda Slams Karnataka Govt
Highlights

ಯಾವುದೇ ಕ್ಷಣದಲ್ಲಿ ಕರ್ನಾಟಕದಲ್ಲಿ ರಚಿತವಾಗಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಸಾಂಖ್ಯಿಕ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. 

ಮಂಗಳೂರು: ಯಾವುದೇ ಕ್ಷಣದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಸಾಂಖ್ಯಿಕ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ ಕುರ್ಚಿಗಾಗಿ ಕಚ್ಚಾಟ ನಡೆಸುತ್ತಿದ್ದು, ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. 

ಮೈತ್ರಿ ಸರ್ಕಾರ ಯಾವಾಗ ಹೋಗು ತ್ತದೆ ಎಂದು ಜನರು ಕಾಯು ತ್ತಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡು ಪಕ್ಷಗಳು ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿವೆ. ಅದನ್ನು ಹೊರತುಪಡಿಸಿದರೆ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದರು. ರಾಜ್ಯದಲ್ಲಿ ಮಳೆಯಾಗುತ್ತಿದ್ದರೂ ಸರ್ಕಾರ ಇನ್ನೂ ಸಭೆ ನಡೆಸಿಲ್ಲ ಎಂದು ಕಿಡಿಕಾರಿದರು.

loader