ಶ್ರೀನಗರ(ಮೇ.05): ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮುಖಂಡನೋರ್ವನನ್ನು ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಅನಂತ್‌ನಾಗ್ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷ ಗುಲ್ ಮೊಹ್ಮದ್ ಮಿರ್ ಅವರನ್ನು ಅಪರಚಿತ ಬಂದೂಕುಧಾರಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಮೊಹ್ಮದ್ ಮಿರ್ ಮನೆಗೆ ನುಗ್ಗಿದ ಮೂವರು ಶಂಕಿತ ಉಗ್ರರು, ಮಿರ್ ಅವರನ್ನು ಕಾರಿನಲ್ಲಿ ಕೂರಿಸಿಕೊಂಡು ತುಸು ದೂರ ಹೋದ ಬಳಿಕ, ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಘಟನೆಯನ್ನು ತೀವ್ರವಾಗಿ ಖಂಡಿಸಿರುವ ರಾಜ್ಯ ಬಿಜೆಪಿ ಘಟಕ, ಗುಲ್ ಮೊಹ್ಮದ್ ಮಿರ್ ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ಹಿಂಪಡೆದಿದ್ದೇ ಘಟನೆಗೆ ಕಾರಣ ಎಂದು ಆರೋಪಿಸಿದೆ.