ಚಾಮರಾಜನಗರ ಉಸ್ತುವಾರಿಗೆ ಸೋಮಣ್ಣ ರಾಜಿನಾಮೆ

BJP Leader Sommanna Resigns To Incharge Post
Highlights

  • ಜಿಲ್ಲಾ ಬಿಜೆಪಿಯಲ್ಲಿ ಮತ್ತೆ ಆಂತರಿಕ ಕಲಹ
  • ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಪ್ಪ ಅವರ ವರ್ತನೆಯಿಂದ ಬೇಸತ್ತು ರಾಜಿನಾಮೆ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಬಿಜೆಪಿ ಉಸ್ತುವಾರಿಗೆ ಮಾಜಿ ಸಚಿವ ವಿ. ಸೋಮಣ್ಣ ಬುಧವಾರ ರಾಜಿನಾಮೆ ನೀಡಿದ್ದಾರೆ.

ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಪ್ಪ ಅವರ ವರ್ತನೆಯಿಂದ ಬೇಸತ್ತು ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಮಲ್ಲಿಕಾರ್ಜುನಪ್ಪ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದಂದಿನಿಂದ ಪಕ್ಷವನ್ನು ಗೊಂದಲದ ಗೂಡಾಗಿ ಮಾಡಿದ್ದಾರೆ. ಇವರು ಮಾಡುವ ಅಪಪ್ರಚಾರಗಳಿಗೆ ನನ್ನನ್ನು ಹೊಣೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಮುಜುಗರ ಆಗಬಾರದು ಹಾಗೂ ತಮ್ಮ ವರ್ಚಸ್ಸಿಗೆ ಧಕ್ಕೆ ಆಗಬಾರದು ಎನ್ನುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿರುವ ಎರಡು ಪುಟಗಳ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಜತೆಗೆ, ಹಾಸನ ಜಿಲ್ಲಾ ಉಸ್ತುವಾರಿಯಾಗಿ ಪಕ್ಷ ಸಂಘಟನೆಯಲ್ಲಿ ಮುಂದುವರಿಯುವುದಾಗಿ ಸೋಮಣ್ಣ ತಿಳಿಸಿದ್ದಾರೆ. ಈ ಮುಂಚೆ ಸೋಮಣ್ಣ ಅವರು ಹನೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವರು ಎಂದು ಹೇಳಲಾಗಿತ್ತು. ಆದರೆ ಸೋಮಣ್ಣ ಅವರ ಆಸೆಗೆ ಪರಿಮಳಾ ನಾಗಪ್ಪ ಅಡ್ಡಿಯಾಗಿದ್ದಾರೆ.

loader