ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ವಿದ್ಯಾರ್ಥಿ ಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ತುಮಕೂರು(ಅ.31): ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ವಿದ್ಯಾರ್ಥಿ ಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ತಾಲೂಕಿನ ನಾಗವಲ್ಲಿಯ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ತಮ್ಮ ಐದು ವರ್ಷಗಳ ಸಾಧನೆ ಕರಪತ್ರವನ್ನು ಪ್ರತಿ ಮನೆಮನೆಗೆ ಪೋಸ್ಟ್ ಮಾಡಿಸುತ್ತಿದ್ದಾರೆ. ಶಾಲಾ ಶಿಕ್ಷಕರು ಕೂಡಾ ಇದಕ್ಕೆ ಸಾಥ್ ನೀಡುತಿದ್ದಾರೆ. ಅಲ್ಲದೆ ಮುಂದಿನ ಬಾರಿ ತಮಗೇ ಮತ ಹಾಕುವಂತೆ ವಿದ್ಯಾರ್ಥಿಗಳ ಮೂಲಕ ಪೋಷಕರಿಗೆ ಒತ್ತಡ ಹಾಕುತಿದ್ದಾರೆ ಎಂದು ಆರೋಪಿಸಲಾಗಿದೆ. ಕರಪತ್ರ ಹಂಚುತ್ತಿರುವುದು ಇದೀಗ ಬಹಿರಂಗವಾಗಿದೆ.