ಪದ್ಮಾವತಿ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಯಾವುದೇ ಅಡ್ಡಿ ಇಲ್ಲ ಎಂಬ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಗೆ, ರಾಜ್ಯದ ಬಿಜೆಪಿ ನಾಯಕರೊಬ್ಬರು ತಿರುಗೇಟು ನೀಡಿದ್ದಾರೆ.

ಕೋಲ್ಕತಾ: ಪದ್ಮಾವತಿ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಯಾವುದೇ ಅಡ್ಡಿ ಇಲ್ಲ ಎಂಬ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಗೆ, ರಾಜ್ಯದ ಬಿಜೆಪಿ ನಾಯಕರೊಬ್ಬರು ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸೂರಜ್ ಪಾಲ್ ‘ಶೂರ್ಪನಖಿ ರೀತಿಯ ಕೆಟ್ಟ ಉದ್ದೇಶಗಳನ್ನು ಇಟ್ಟುಕೊಂಡ ಕೆಲ ಮಹಿಳೆಯರಿದ್ದಾರೆ. ಲಕ್ಷ್ಮಣ ಶೂರ್ಪನಖಿಯ ಮೂಗು ಕತ್ತರಿಸಿ ಆಕೆಗೆ ಬುದ್ಧಿ ಕಲಿಸಿದ್ದ. ಮಮತಾ ಬ್ಯಾನರ್ಜಿ ಅವರು ಈ ವಿಷಯವನ್ನು ಮರೆಯಬಾರದು’ ಎನ್ನುವ ಮೂಲಕ, ನಿಮಗೂ ಶೂರ್ಪನಖಿಯ ಗತಿಯೇ ಆಗುತ್ತದೆ ಎಂದು ಎಚ್ಚರಿಸಿದ್ದಾರೆ.