ಚಿತ್ರದುರ್ಗ (ಸೆ.18): ಬಿಜೆಪಿ ಮುಖಂಡ ಈಶ್ವರಪ್ಪ ಹುಟ್ಟುಹಾಕಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಗ್ಗೆ ಪಕ್ಷದೊಳಗಿರುವ ಅಸಮಾಧಾನ ಬಹಿರಂಗವಾಗತೊಡಗಿದೆ.
ರಾಯಣ್ಣ ಬ್ರಿಗೇಡ್ ಜೊತೆ ಗುರುತಿಸಿಕೊಂಡರೆ ಅಥವಾ ಕಾರ್ಕ್ರಮಗಳಲ್ಲಿ ಭಾಗವಹಿಸಿದರೆ ಅಂತಹ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ನಾಯಕರು ಎಚ್ಚರಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ರಾಯಣ್ಣ ಬ್ರಿಗೇಡ್’ಗೆ ಸೇರಿದರೆ ಅಥವಾ ಅದರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರೆ ಅಂಥವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದಾರೆ.
ಈಶ್ವರಪ್ಪನವರು ಸ್ವಂತ ರಾಜಕೀಯ ಲಾಭಕ್ಕಾಗಿ ರಾಯಣ್ಣ ಹೆಸರು ಬಳಸಿಕೊಂಡು ಕಾರ್ಯಕರ್ತ ರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಪುಟ್ಟಸ್ವಾಮಿ ಹೇಳಿದ್ದಾರೆ.
ಪಕ್ಷದಲ್ಲಿ ಉನ್ನತ ಸ್ಥಾನ ಹೊಂದಿದ್ದರೂ ಜವಾಬ್ದಾರಿ ಮರೆತು ಯಡಿಯೂರಪ್ಪ ರಾಯಣ್ಣ ಬ್ರಿಗೇಡ್ ಉದ್ಘಾಟಿಸುತ್ತಾರೆ ಎಂದು ಹೇಳುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲವೆಂದು ಅವರು ಹೇಳಿದ್ದಾರೆ.
