ಬೆಂಗಳೂರು(ಸೆ.23): ಕಾವೇರಿ ಪರ ಧ್ವನಿಯೆತ್ತದ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ. ಸದಾನಂದ ಗೌಡ, ನಿರ್ಮಲ ಸೀತರಾಮನ್ ಹಾಗೂ ವೆಂಕಯ್ಯ ನಾಯ್ಡು ನಾಲಾಯಕರು ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುರುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭಾಗವಹಿಸದೇ ಇರುವುದು ಅವರ ಸೊಕ್ಕನ್ನು ತೋರಿಸುತ್ತದೆ ಎಂದು ವಾಟಾಳ್ ಕಿಡಿಕಾರಿದ್ದಾರೆ. ಕಾವೇರಿ ಹಾಗೂ ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಯಕರು ಮಾಡುತ್ತಿರುವ ನಾಟಕವನ್ನು ಕರ್ನಾಟಕದ ಜನತೆ ಗಮನಿಸುತ್ತಿದ್ದಾರೆ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ನಾಯಕರುಗಳಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಮಾತನಾಡಿ, ರಾಜ್ಯ ಬಿಜೆಪಿ ನಾಯಕರು ರಾಜಕೀಯ ಮಾಡಬಾರದು, ಅವರು ಮೋದಿ ಕರ್ನಾಟಕದ ಪರವಾಗಿ ಮಾತನಾಡುವಂತೆ ಕೇಳಬಹುದಿತ್ತು ಎಂದು ಅವರು ಹೇಳಿದರು.