ಬೇಳೂರು ಗೋಪಾಲ ಕೃಷ್ಣ ವಿರುದ್ಧ ಬಿಜೆಪಿ ನಾಯಕರು ಗರಂ

First Published 22, Jun 2018, 8:41 AM IST
BJP Leaders Slams Belur Gopalakrishna
Highlights

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮನೆ ಮೇಲೆ ಐಟಿ ದಾಳಿ ನಡೆಸಿದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಖಜಾನೆ ಸಿಗುತ್ತದೆ ಎಂದು ಟೀಕಿಸಿದ್ದ ಬೇಳೂರು ಗೋಪಾಲಕೃಷ್ಣ ಹೇಳಿಕೆಗೆ ಶಾಸಕ ಕೆ.ಎಸ್. ಈಶ್ವರಪ್ಪ ಸೇರಿದಂತೆ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ ತಿರುಗೇಟು ನೀಡಿದ್ದಾರೆ. 

ಶಿವಮೊಗ್ಗ: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮನೆ ಮೇಲೆ ಐಟಿ ದಾಳಿ ನಡೆಸಿದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಖಜಾನೆ ಸಿಗುತ್ತದೆ ಎಂದು ಟೀಕಿಸಿದ್ದ ಬೇಳೂರು ಗೋಪಾಲಕೃಷ್ಣ ಹೇಳಿಕೆಗೆ ಶಾಸಕ ಕೆ.ಎಸ್. ಈಶ್ವರಪ್ಪ ಸೇರಿದಂತೆ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ ತಿರುಗೇಟು ನೀಡಿದ್ದಾರೆ. 

ಬೇಳೂರು ಗೋಪಾಲಕೃಷ್ಣ ಅವರ ಹೇಳಿಕೆಗೆ ಮಹತ್ವ ಕೊಡಬೇಕಾದ ಅಗತ್ಯವಿಲ್ಲ. ಹತಾಶ ಮನೋಭಾವನೆಯಿಂದ ಬಿಜೆಪಿ ರಾಜ್ಯ ನಾಯಕರ ವಿರುದ್ಧ ಹೇಳಿಕೆ ನೀಡಿದ್ದಾರೆ. ವ್ಯಕ್ತಿಗಳಿಗೆ ರಾಜಕಾರಣದಲ್ಲಿ ನಿರಾಸೆಯಾದಾಗ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂಬುದಕ್ಕೆ ಗೋಪಾಲಕೃಷ್ಣ ಸಾಕ್ಷಿ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. 

loader