ಬಿಜೆಪಿ ನಾಯಕರಿಂದ ಹೊಸ ಮಾಸ್ಟರ್ ಪ್ಲಾನ್

BJP Leaders start sampark abhiyan
Highlights

2019 ರ ಲೋಕಸಭಾ ಚುನಾವಣೆಗೆ ಸಿದ್ಧತೆಯ ಭಾಗವಾಗಿ ವಿವಿಧ ಕ್ಷೇತ್ರಗಳ ಗಣ್ಯರ ಭೇಟಿ ಮಾಡಿ ಮೋದಿ ಸರ್ಕಾರದ ಸಾಧನೆಯನ್ನು ವಿವರಿಸಲು ಬಿಜೆಪಿ ಮುಂದಾಗಿದೆ. ಪ್ರತಿನಿತ್ಯ ತಮ್ಮ ಸಂಪರ್ಕದಲ್ಲಿರುವ ಗಣ್ಯರನ್ನು ಭೇಟಿ ಮಾಡಿ ಮೋದಿ ಸರ್ಕಾರದ ಸಾಧನೆಗಳನ್ನು ವಿವರಿಸುವ ಕೆಲಸ ಪ್ರಾರಂಭಿಸಿದ್ದಾರೆ. 

ಬೆಂಗಳೂರು :  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 4  ವರ್ಷ ಪೂರೈಸಿ ಚುನಾವಣಾ ವರ್ಷದಲ್ಲಿರುವ ಹೊತ್ತಿನಲ್ಲಿ ಬಿಜೆಪಿ ನಾಯಕರು ಗಣ್ಯ ವ್ಯಕ್ತಿಗಳನ್ನು ಭೇಟಿ ಮಾಡಿ ತಮ್ಮ ಸರ್ಕಾರದ ಸಾಧನೆಗಳನ್ನು ಹೇಳಿಕೊಳ್ಳುವ ‘ಸಂಪರ್ಕ ಅಭಿಯಾನ’ ನಡೆಸಿದ್ದಾರೆ. ಮೇ 29 ಕ್ಕೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದ ಅಭಿಯಾನದ ಅಂಗವಾಗಿ ಹಲವು ಗಣ್ಯರಿಗೆ ಮೋದಿ ಸರ್ಕಾರದ ಸಾಧನೆ ಯುಳ್ಳ ಕಿರುಪುಸ್ತಕ ನೀಡಿ ಕೇಂದ್ರದ ಬಗ್ಗೆ ಅರಿವು ಮೂಡಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಪಕ್ಷದ ಹಿರಿಯ ಮುಖಂಡ ಹಾಗೂ ಶಾಸಕ ಬಿ. ಶ್ರೀರಾಮುಲು ಮಂಗಳವಾರ ನಟ ಯಶ್ ಮತ್ತು ನಾರಾಯಣ ಹೃದಯಾಲಯ ಸಂಸ್ಥೆಯ ಹೃದಯ ತಜ್ಞ ಡಾ.ದೇವಿಶೆಟ್ಟಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಪ್ರಧಾನಿ ಮೋದಿ ಸರ್ಕಾರದ ಸಾಧನೆ ಕುರಿತಾದಕಿರುಹೊತ್ತಿಗೆ ನೀಡಿ ವಿವರಿಸಿದರು. 

ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದರು. 2019 ರ ಲೋಕಸಭಾ ಚುನಾವಣೆಗೆ ಸಿದ್ಧತೆಯ ಭಾಗವಾಗಿ ವಿವಿಧ ಕ್ಷೇತ್ರಗಳ ಗಣ್ಯರ ಭೇಟಿ ಮಾಡಿ ಮೋದಿ ಸರ್ಕಾರದ ಸಾಧನೆಯನ್ನು ವಿವರಿಸಲು ಬಿಜೆಪಿ ಮುಂದಾಗಿದೆ. ಪ್ರತಿನಿತ್ಯ ತಮ್ಮ ಸಂಪರ್ಕದಲ್ಲಿರುವ ಗಣ್ಯರನ್ನು ಭೇಟಿ ಮಾಡಿ ಮೋದಿ ಸರ್ಕಾರದ ಸಾಧನೆಗಳನ್ನು ವಿವರಿಸುವ ಕೆಲಸ ಪ್ರಾರಂಭಿಸಿದ್ದಾರೆ. 

ಗಣ್ಯರ ಭೇಟಿ ವೇಳೆ ಮೋದಿ ಸರ್ಕಾರದ ನಾಲ್ಕು ವರ್ಷದ ಸಾಧನೆಯುಳ್ಳ ಕಿರು ಪುಸ್ತಕ ನೀಡುವುದರ ಜತೆಗೆ ಕಪ್ಪು ಹಣ ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡ ಲಾಗುತ್ತಿದೆ. ಗಂಗಾನದಿ ಶುದ್ಧೀಕರಣ ಕುರಿತು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಅಂಕಿ ಸಂಖ್ಯೆ ಸಮೇತ ವಿವರಣೆ ನೀಡಲಾಗುತ್ತಿದೆ. 2014 ರಲ್ಲಿ ನೀಡಿದ ಭರವಸೆಗಳನ್ನು ಈಡೇರಿಕೆಗೆ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಈ ಮೂಲಕ ಗಣ್ಯರಿಗೆ ಎನ್‌ಡಿಎ ಸರ್ಕಾರದ ಬಗ್ಗೆ ಸದಭಿಪ್ರಾಯ ಮೂಡಿಸಲು ಪ್ರಯತ್ನಿಸಲಾಗುತ್ತಿದೆ.

loader