ಮೈಸೂರು [ಸೆ.20]:  ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದರೆ ಉತ್ತಮ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಹೇಳಿದ್ದಾರೆ. 

ಮೈಸೂರಿನಲ್ಲಿ ಮಾತನಾಡಿದ ಅಶ್ವತ್ಥ್ ನಾರಾಯಣ್ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಸಂಪುಟ ಇದ್ದರೆ ಒಳ್ಳೆಯದು. ಈ ನಿಟ್ಟಿನಲ್ಲಿ ಹೀಗೆ ಹೇಳುತ್ತಿದ್ದೇನೆ ಎಂದರು.

17 ಅನರ್ಹ ಶಾಸಕರು ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ನಮ್ಮ ನಾಯಕರು ಸೂಕ್ತ ತೀರ್ಮಾನ ತೆಗೆದು ಕೊಳ್ಳುತ್ತಿದ್ದಾರೆ. ನಮ್ಮೆಲ್ಲಾ ಸ್ನೇಹಿತರು ನಮ್ಮ ಜೊತೆಗೆ ಇದ್ದಾರೆ. ಯಾರಿಗೂ ಅಸಮಾಧಾನವಿಲ್ಲ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಹೇಳಿದರು. 

ರಾಜ್ಯದಲ್ಲಿ 17 ಮಂದಿ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದು ಬಳಿಕ ಅವರನ್ನು ಸ್ಪೀಕರ್ ಅನರ್ಹರನ್ನಾಗಿಸಿದ್ದರು.