ಅಭ್ಯರ್ಥಿ ಆಯ್ಕೆ ಕುರಿತು ಬಿಜೆಪಿ ಅಂತಿಮ ಸಭೆ; ಆಕಾಂಕ್ಷಿಗಳಲ್ಲಿ ಶುರುವಾಗಿದೆ ನಡುಕ

First Published 7, Apr 2018, 9:55 AM IST
BJP Meeting
Highlights

ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಕಸರತ್ತು ಇಂದೂ ಮುಂದುವರೆದಿದೆ.  ಅಭ್ಯರ್ಥಿ ಆಯ್ಕೆ ಕುರಿತು ಯಲಹಂಕದ ಖಾಸಗಿ ರೆಸಾರ್ಟ್’ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ  ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಸಭೆ ನಡೆಯಲಿದೆ. 

ಬೆಂಗಳೂರು (ಏ. 07):  ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಕಸರತ್ತು ಇಂದೂ ಮುಂದುವರೆದಿದೆ.  ಅಭ್ಯರ್ಥಿ ಆಯ್ಕೆ ಕುರಿತು ಯಲಹಂಕದ ಖಾಸಗಿ ರೆಸಾರ್ಟ್’ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ  ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಸಭೆ ನಡೆಯಲಿದೆ. 

ಕೊಡಗು, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ,  ಉತ್ತರ ಕನ್ನಡ, ಮೈಸೂರು ನಗರ, ಮೈಸೂರು ಗ್ರಾಮಾಂತರ, ಚಾಮರಾಜನಗರದಲ್ಲಿ ಟಿಕೆಟ್ ಹಂಚಿಕೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

ನಾಳೆ ದೆಹಲಿಯಲ್ಲಿ ಬಿಜೆಪಿ ಸ್ಕ್ರೀನಿಂಗ್ ಕಮಿಟಿಯಲ್ಲಿ ಅಂತಿಮ ಪಟ್ಟಿ ತಯಾರಿ ನಡೆಯಲಿದೆ.  ನಾಳೆ ಅಥವಾ ನಾಡಿದ್ದು  ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ.  ನಾಳೆ ಸಂಜೆ ಅಥವಾ ನಾಡಿದ್ದು ಮೊದಲ ಹಂತದಲ್ಲಿ 108 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ ಇದೆ. 
ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿದ್ರೆ ಎಂಬ ಆತಂಕ ಆಕಾಂಕ್ಷಿಗಳಲ್ಲಿದೆ. 
 

loader