Asianet Suvarna News Asianet Suvarna News

’ನನಗೆ ಸಿದ್ದರಾಮಯ್ಯ ಆಶೀರ್ವಾದ ಬೇಕಾಗಿಲ್ಲ ಕ್ಷೇತ್ರದ ಜನರ ಪ್ರೀತಿ ಸಾಕು’

ಅವನು ಯಾವನೂ ಶ್ರೀನಿವಾಸ ಶೆಟ್ಟಿ ನನಗೆ ಗೊತ್ತೇ ಇಲ್ಲ ಎಂದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಾಲಾಡಿ ಶ್ರೀನಿವಾಸ ಶೆಟ್ಟಿ ತಿರುಗೇಟು ನೀಡಿದ್ದಾರೆ. ಸಿದ್ದುಗೆ ಶ್ರೀನಿವಾಸ ಶೆಟ್ಟಿ ಹೇಗೆ ಗುದ್ದು ನೀಡಿದ್ದಾರೆ ನೋಡಿ.

BJP MLA Halady Srinivas Shetty reacts against Siddaramaiah Over His Statement
Author
Bengaluru, First Published Oct 27, 2018, 5:59 PM IST
  • Facebook
  • Twitter
  • Whatsapp

ಉಡುಪಿ, [ಅ.27]: ಸಿದ್ದರಾಮಯ್ಯ ಏಕವಚನದಲ್ಲಿ ಹಗುರವಾಗಿ ಮಾತನಾಡುತ್ತಾರೆ. ಏಕವಚನದಲ್ಲಿ ಮಾತನಾಡುವಷ್ಟು ನನಗೆ ಅವರ ಜೊತೆ ಸಲಿಗೆ ಇಲ್ಲ ಸಲಿಗೆ ಇದ್ದವರಲ್ಲಿ ಅವರು ಮಾತನಾಡಲಿ ಎಂದು ಸಿದ್ದರಾಮಯ್ಯ ಅವರಿಗೆ ಹಾಲಾಡಿ ಶ್ರೀನಿವಾಸ ಶೆಟ್ಟಿ,ತಿರುಗೇಟು ಕೊಟ್ಟಿದ್ದಾರೆ.

ಅವನು ಯಾವನೂ ಶ್ರೀನಿವಾಸ ಶೆಟ್ಟಿ ನನಗೆ ಗೊತ್ತೇ ಇಲ್ಲ ಎಂದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕುಂದಾಪುರದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ,  ಒಬ್ಬ ಮಾಜಿ ಮುಖ್ಯಮಂತ್ರಿಗೆ ಇದು ಶೋಭೆಯಲ್ಲ ಎಂದು ಹೇಳಿದರು.

ಹಲವಾರು ಬಾರಿ ನಾನು ಅವರನ್ನು ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಸೇರುವಂತೆ ಸಿದ್ದರಾಮಯ್ಯ ಒತ್ತಾಯಿಸಿದ್ರು. ನಾನು ಸೇರುವುದಿಲ್ಲ ಅಂತ ನೇರವಾಗಿ ಹೇಳಿದ್ದೆ. ನಾನು ಯಾರು ಅಂತ ಗೊತ್ತಿಲ್ಲದೆ ಅವರು ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾದ್ರಾ?

ಸಿದ್ದರಾಮಯ್ಯ ಮಾತಿನಿಂದ ಮತದಾರರಿಗೆ ಬಹಳ ಬೇಸರ ಆಗಿದೆ.ನಾನು ರಾಜಕೀಯವಾಗಿಯೂ ಹಗುರವಾಗಿ ಮಾತನಾಡುವ ವ್ಯಕ್ತಿ ಅಲ್ಲ. ಒಂದು ಹುದ್ದೆಗೆ ಹೋದ ಕೂಡಲೇ ದೊಡ್ಡ ಮನುಷ್ಯ ಆಗಲ್ಲ.ಆತನ ಮಾತು ನಡವಳಿಗೆ ಸರಿ ಇರಬೇಕು 

ನಾನು ಸಿದ್ದರಾಮಯ್ಯನ ಆಶೀರ್ವಾದದಲ್ಲಿ ಬದುಕಿದವ ಅಲ್ಲ. ನನಗೆ ಜನ 56 ಸಾವಿರ ಮತದ ಅಂತರದಲ್ಲಿ ಗೆಲ್ಲಿಸಿದ್ದು, ನನಗೆ ಸಿದ್ದರಾಮಯ್ಯ ಆಶೀರ್ವಾದ ಬೇಕಾಗಿಲ್ಲ. ಕುಂದಾಪುರ ಕ್ಷೇತ್ರದ ಜನರ ಪ್ರೀತಿ ಸಾಕು ಎಂದು ಸಿದ್ದರಾಂಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಉಡುಪಿಯ ಬೈಂದೂರಲ್ಲಿ ನಡೆದಿದ್ದ ಸಮಾವೇಶದಲ್ಲಿ ಅವನು ಯಾವನೂ ಶ್ರೀನಿವಾಸ ಶೆಟ್ಟಿ ನನಗೆ ಗೊತ್ತೇ ಇಲ್ಲ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

Follow Us:
Download App:
  • android
  • ios