ಕೆಲವು ದಿನಗಳಿಂದ ಹಂದಿ ಜ್ವರದಿಂದ ಬಳಲುತ್ತಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಜೈಪುರ(ಆ.28): ಹಂದಿ ಜ್ವರಕ್ಕೆರಾಜಸ್ಥಾನದ ಶಾಸಕಿಯೊಬ್ಬರು ಬಲಿಯಾಗಿದ್ದಾರೆ. ಬಿಜೆಪಿ ಶಾಸಕಿ ಕೀರ್ತಿ ಕುಮಾರಿ(50) ಅವರು ಭಿಲ್ವಾರ ಜಿಲ್ಲೆಯ ಮಂಡಲ್‌ಗಢ ವಿಧಾನಸಭಾ ಕ್ಷೇತ್ರದ ಸದಸ್ಯರಾಗಿದ್ದರು. ಕೆಲವು ದಿನಗಳಿಂದ ಹಂದಿ ಜ್ವರದಿಂದ ಬಳಲುತ್ತಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಇವರು ನಿಧನರಾಗಿದ್ದಾರೆ. ಕೀರ್ತಿ ಅವರ ನಿಧನಕ್ಕೆ ರಾಜಸ್ಥಾನ ಮುಖ್ಯಮಂತ್ರಿ ವಸುಂದರಾ ರಾಜೇ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
