ಬೆಳಗಾವಿ(ಆ.17): ನಾಡು, ನುಡಿ ಜಲದ ವಿಚಾರದಲ್ಲಿ ಬದ್ಧತೆ ಪ್ರದರ್ಶಿಸಬೇಕಿದ್ದ ಬೆಳಗಾವಿಯ ಬಿಜೆಪಿ ಶಾಸಕ ಸಂಜಯ ಪಾಟೀಲ್ ಮರಾಠಿ ಪ್ರೇಮ ಪ್ರದರ್ಶಿಸಿ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಇಂದು ಬೆಳಗಾವಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮರಾಠಿಯಲ್ಲಿ ಮಾತನಾಡಿದ ಶಾಸಕ ಪಾಟೀಲ್ ನೂತನ ರಾಷ್ಟ್ರಪತಿ, ಉಪ ರಾಷ್ಟ್ರಪತಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಬೆಳಗಾವಿ ಪಾಲಿಕೆಯಲ್ಲಿ ಎಂಇಎಸ್ ಪ್ರಾಬಲ್ಯವಿದೆ. ಆದರೆ ಪಾಲಿಕೆ ಅಧಿಕಾರಿಗಳು ಕನ್ನಡ ಗಟ್ಟಿಗೊಳಿಸುವ ಕೆಲಸ ಮಾಡುತ್ತಲೆ ಇದ್ದು, ನಾಡಗೀತೆಯನ್ನು ಕಡ್ಡಾಯಗೊಳಿಸಿದೆ. ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ ಶಾಸಕ ಸಂಜಯ ಪಾಟೀಲ್ ಮರಾಠಿ ಭಾಷೆಯಲ್ಲಿ ಮಾತನಾಡುವ ಮೂಲಕ ಕನ್ನಡ ಭಾಷೆ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಕನ್ನಡಪರ ಸಂಘಟನೆಗಳು ಖಂಡಿಸಿವೆ.