ಟಿಪ್ಪು ಜಯಂತಿಗೆ ಪಕ್ಷ ವಿರೋಧ ವ್ಯಕ್ತಪಡಿಸುತ್ತಿದ್ದರೂ ಬಿಜೆಪಿ ಶಾಸಕ ಟಿಪ್ಪು ಜಯಂತಿ ಆಚರಣೆಯಲ್ಲಿ ಭಾಗವಹಿಸಿದ್ದಾರೆ.
ಬಳ್ಳಾರಿ: ಟಿಪ್ಪು ಜಯಂತಿಗೆ ಪಕ್ಷ ವಿರೋಧ ವ್ಯಕ್ತಪಡಿಸುತ್ತಿದ್ದರೂ ಬಿಜೆಪಿ ಶಾಸಕ ಟಿಪ್ಪು ಜಯಂತಿ ಆಚರಣೆಯಲ್ಲಿ ಭಾಗವಹಿಸಿದ್ದಾರೆ.
ಹೊಸಪೇಟೆ ನಗರಸಭೆ ಆವರಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿಜೆಪಿ ಶಾಸಕ ಆನಂದ್ ಸಿಂಗ್, ನಾನು ಯಾರ ಪರ ಇಲ್ಲ, ವಿರೋಧವೂ ಇಲ್ಲ ಎಂದು ಹೇಳಿದ್ದಾರೆ.
ಹೊಸಪೇಟೆಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಶ್ರೀ ಕೃಷ್ಣ ದೇವರಾಯ ಎಲ್ಲಾ ಹಬ್ಬಗಳನ್ನು ಆಚರಣೆ ಮಾಡ್ತಿದ್ರು, ನಾನು ಯಾರ ಪರ ಇಲ್ಲ, ವಿರೋಧವೂ ಇಲ್ಲ, ರಾಜಕೀಯಕ್ಕೆ ಮುಗ್ದ ಜನರು ಬಲಿಯಾಗುತ್ತಿದ್ದಾರೆ ಎಂದು ಹೇಳಿದ್ದಾರೆ.
