ರೈತರ ಸಾಲಮನ್ನಾಗೆ ಆಗ್ರಹಿಸಿ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಬಿಜೆಪಿ ಮುಖಂಡರು ಬಂದ್  ನಡೆಸುತ್ತಿದ್ದಾರೆ. ಮೈಸೂರಿನಲ್ಲಿಯೂ ಕೂಡ ಬಿಜೆಪಿ ಮುಖಂಡರು ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಮೈಸೂರು : ರೈತರ ಸಾಲಮನ್ನಾಗೆ ಆಗ್ರಹಿಸಿ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಬಿಜೆಪಿ ಮುಖಂಡರು ಬಂದ್ ನಡೆಸುತ್ತಿದ್ದಾರೆ.

Add Asianetnews Kannada as a Preferred SourcegooglePreferred

ಮೈಸೂರಿನಲ್ಲಿಯೂ ಕೂಡ ಬಿಜೆಪಿ ಮುಖಂಡರು ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬನ್ನಿ ಮಂಟಪದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಹಾಗೂ ಪ್ರತಾಪ್ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಅಲ್ಲದೇ ಪ್ರತಿಭಟನೆ ನಡೆಸುತ್ತಿದ್ದ ಶಾಸಕ ನಾಗೇಂದ್ರ ಹಾಗೂ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆಸಿದ್ದಾರೆ. ಬಂದ್ ನಡೆಸದಂತೆ ಸೂಚನೆ ನೀಡಿದ್ದರೂ ಸಹ ರೈತರ ಸಾಲಮನ್ನಾಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು.