ಗುಜರಾತ್ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯು ಮುಕ್ತಾಯವಾಗಿದ್ದು, ಬಹುತೇಕ ಚುನಾವಣಾ ಸಮೀಕ್ಷೆಗಳು ಬಿಜೆಪಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಭವಿಷ್ಯ ನುಡಿದಿವೆ.

ಅಹಮದಾಬಾದ್(ಡಿ.16): ಆಡಳಿತ ವಿರೋಧಿ ಆರೋಪ ಹೊಂದಿರುವ ಬಿಜೆಪಿ ಸರ್ಕಾರವು ಗುಜರಾತ್ ಚುನಾವಣೆಯಲ್ಲಿ ನೆಲಕಚ್ಚಲಿದೆ ಎಂದು ಬಿಜೆಪಿ ಸಂಸದ ಸಂಜಯ್ ಕಾಕಡೆ ಭವಿಷ್ಯ ನುಡಿದಿದ್ದಾರೆ.

ನಾನು ಈಗಾಗಲೇ ರಾಜ್ಯಾದ್ಯಂತ ಸಮೀಕ್ಷೆ ನಡೆಸಿದ್ದು, ಬಿಜೆಪಿ ದಯಾನೀಯ ಸೋಲು ಕಾಣಲಿದೆ. ಈ ಬಾರಿ ಮೈತ್ರಿ ಮಾಡಿಕೊಂಡರೂ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಪುಣೆ ಸಂಸದ ಕಾಕಡೆ ಹೇಳಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯು ಮುಕ್ತಾಯವಾಗಿದ್ದು, ಬಹುತೇಕ ಚುನಾವಣಾ ಸಮೀಕ್ಷೆಗಳು ಬಿಜೆಪಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಭವಿಷ್ಯ ನುಡಿದಿವೆ. ಆದರೆ ಬಿಜೆಪಿ ಸಂಸದರೇ ತಮ್ಮ ಪಕ್ಷ ಹೀನಾಯ ಸೋಲು ಅನುಭವಿಸಲಿದೆ ಎಂಬ ಹೇಳಿಕೆ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಗುಜರಾತ್'ನಲ್ಲಿ 182 ವಿಧಾನಸಭಾ ಸ್ಥಾನಗಳಿದ್ದು, ರಾಜ್ಯದಲ್ಲಿ ಕಳೆದ 22 ವರ್ಷಗಳಿಂದ ಅಧಿಕಾರ ನಡೆಸುತ್ತಿದೆ.