ಮುಂಬೈ(ಅ.29): ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಬಿಜೆಪಿ-ಶಿವಸೇನೆ ನಡುವೆ ಇನ್ನೂ ಗೊಂದಲ ಮುಂದುವರೆದಿದ್ದು, ಶಿವಸೇನೆ ನಡುವೆ ಇನ್ನೂ ಗೊಂದಲ ಮುಂದುವರೆದಿದ್ದು, ಶಿವಸೇನೆ ತನ್ನ ಬೇಡಿಕೆಗಳ ಈಡೇರಿಕೆಗಾಗಿ ತೀವ್ರ ಪಟ್ಟು ಹಿಡಿದಿದೆ.

50-50ಕ್ಕೆ ಲಿಖಿತ ಭರವಸೆ ಕೊಡಿ: ಅಪನಂಬಿಕೆಯ ಹಗ್ಗದ ಮೇಲೆ ಬಿಜೆಪಿ-ಶಿವಸೇನೆ ಜೋಡಿ!

ಈ ಮಧ್ಯೆ ಶಿವಸೇನೆಯ ಸುಮಾರು 45 ಶಾಸಕರು ದೇವೇಂದ್ರ ಫಡ್ನವೀಸ್ ಅವರೇ ಮುಖ್ಯಮಂತ್ರಿಯಾಗಬೇಕು ಎಂದು ಬಯಸುತ್ತಿರುವುದಾಗಿ ಬಿಜೆಪಿ ರಾಜ್ಯಸಭಾ ಸದಸ್ಯ ಸಂಜಯ್ ಕಾಕಡೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಬಹುಮತವಿದ್ದರೂ ಸರ್ಕಾರ ರಚಿಸಿಲು ಒದ್ದಾಡುತ್ತಿದೆ ಬಿಜೆಪಿ

ಶಿವಸೇನೆ ಪ್ರತಿಪಕ್ಷದಲ್ಲಿ ಕುಳಿತುಕೊಳ್ಳಲು ಬಯಸುವುದಿಲ್ಲ ಎಂದಿರುವ ಕಾಕಡೆ, ಶಿವಸೇನೆಯ 45 ಶಾಸಕರು ಫಡ್ನವೀಸ್ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗಬೇಕು ಎಂದು ಬಯಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಜಕಾರಣಕ್ಕೆ ‘ಮಹಾ’ ಟ್ವಿಸ್ಟ್ : ಪ್ರತ್ಯೇಕವಾಗಿ ಗವರ್ನರ್ ಭೇಟಿ ಮಾಡಿದ ಸೇನೆ, BJP

56 ಶಿವಸೇನಾ ಶಾಸಕರ ಪೈಕಿ 45 ಶಾಸಕರು ಫಡ್ನವೀಸ್ ಮತ್ತೆ ಸಿಎಂ ಆಗಬೇಕು ಎಂದು ಬಯಸುತ್ತಿದ್ದು, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೂ ಇದು ಗೊತ್ತಿದೆ ಎಂದು ಕಾಕಡೆ ಹೊಸ ಬಾಂಬ್ ಸಿಡಿಸಿದ್ದಾರೆ.

ಇನ್ನೂ ಮುಗಿಯದ ಮಹಾ ಬಿಕ್ಕಟ್ಟು; ಅಧಿಕಾರ ಹಂಚಿಕೆಗೆ ಪಟ್ಟು ಬಿಡದ ಬಿಜೆಪಿ-ಶಿವಸೇನೆ

ಜೈಲಿಗೆ ಹೋದ ತಂದೆ ಬಿಡಿಸಿಕೊಳ್ಳಲು 'ಮಹಾ' ದುಷ್ಯಂತ್ ಯಾರು?: ಶಿವಸೇನೆ!