ಪಿಎಫ್‌'ಐ ಹಾಗೂ ಕೆಎಫ್‌'ಡಿ ಸಂಘಟನೆಗಳನ್ನು ನಿಷೇಧಿಸುವಂತೆ ಶೋಭಾ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಆತ್ಮರಕ್ಷಣೆಗಾಗಿ ಪಿಸ್ತೂಲ್ ಹೊಂದಲು ಪರವಾನಗಿ ಬೇಕೆಂದು ಅರ್ಜಿ ಯಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರು(ಡಿ.17): ಜೀವ ಬೆದರಿಕೆ ಹಾಗೂ ಆತ್ಮ ರಕ್ಷಣೆ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಪಿಸ್ತೂಲ್ ಪರವಾನಗಿ ಕೋರಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ.
ಶೋಭಾ ಕರಂದ್ಲಾಜೆ ಅವರು ರಾಜ್ಯದಲ್ಲಿ ನಡೆಯುವ ಹಲವು ಹೋರಾಟಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಹತ್ಯೆ ಹಿಂದೆ ಭಯೋತ್ಪಾದಕರ ಕೈವಾಡ ಇದೆ. ಹೀಗಾಗಿ ಪಿಎಫ್'ಐ ಹಾಗೂ ಕೆಎಫ್'ಡಿ ಸಂಘಟನೆಗಳನ್ನು ನಿಷೇಧಿಸುವಂತೆ ಶೋಭಾ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಆತ್ಮರಕ್ಷಣೆಗಾಗಿ ಪಿಸ್ತೂಲ್ ಹೊಂದಲು ಪರವಾನಗಿ ಬೇಕೆಂದು ಅರ್ಜಿ ಯಲ್ಲಿ ಉಲ್ಲೇಖಿಸಿದ್ದಾರೆ.
ಶೋಭಾ ಅವರು ಸಲ್ಲಿಸಿರುವ ಅರ್ಜಿ ಹಾಗೂ ಕೇಂದ್ರ ಗುಪ್ತದಳದ ವರದಿ, ಕೆಲ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
