ತಮ್ಮ ವೇತನವನ್ನು ತಾವೇ ಹೆಚ್ಚಿಸಿಕೊಳ್ಳುವ  ಜನಪ್ರತಿನಿಧಿಗಳ  ಅಧಿಕಾರವನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಪ್ರಶ್ನೆ ಮಾಡಿದ್ದಾರೆ. ಕಳೆದ 6 ವರ್ಷಗಳಲ್ಲಿ  ಸಂಸದರ ವೇತನವನ್ನು 4 ಬಾರಿ ಏರಿಕೆ ಮಾಡಿಕೊಳ್ಳಲಾಗಿದೆ.

ನವದೆಹಲಿ : ತಮ್ಮ ವೇತನವನ್ನು ತಾವೇ ಹೆಚ್ಚಿಸಿಕೊಳ್ಳುವ ಜನಪ್ರತಿನಿಧಿಗಳ ಅಧಿಕಾರವನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಪ್ರಶ್ನೆ ಮಾಡಿದ್ದಾರೆ. ಕಳೆದ 6 ವರ್ಷಗಳಲ್ಲಿ ಸಂಸದರ ವೇತನವನ್ನು 4 ಬಾರಿ ಏರಿಕೆ ಮಾಡಿಕೊಳ್ಳಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

1952ರಿಂದ 1972ರವರೆಗೆ ಸಂಸತ್ 150 ದಿನ ಕಾರ್ಯನಿರ್ವಹಿಸುತ್ತಿತ್ತು. ಆದರೆ ಇಂದು ಕೇವಲ 50 ದಿನ ಮಾತ್ರವೇ ಸಂಸತ್ ಕಾರ್ಯನಿರ್ವಹಣೆ ಮಾಡುತ್ತದೆ ಎಂದು ಖಾಸಗಿ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.

ಜನಪ್ರತಿನಿಧಿಗಳು ತಮ್ಮ ವೇತನವನ್ನು ತಾವೇ ನಿರ್ಧರಿಸಬಹುದು ಎನ್ನುವುದು ಎಷ್ಟು ಪ್ರಮಾಣದಲ್ಲಿ ಸರಿ ಎಂದು ಅವರು ಪ್ರಶ್ನಿಸಿದ್ದಾರೆ.