ಬೆಂಗಳೂರು[ಆ. 01] ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಅವರು ಪಕ್ಷದವತಿಯಿಂದ ಗೌರವ ಅಭಿನಂದನೆ ಪತ್ರವನ್ನು ಬಿಜೆಪಿ. ನಾಯಕ ಆರ್. ಅಶೋಕ ಅವರನ್ನು ಉದ್ದೇಶಿಸಿ ಬರೆದಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಬಿಜೆಪಿ ಅಭೂತಪೂರ್ವ ಗೆಲುವು ಪಡೆದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಲೋಕಸಭಾ ಚುನಾವಣೆಯಲ್ಲಿ ಶ್ರಮಪಟ್ಟು ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ ಎಂದು ಕೊಂಡಾಡಿದ್ದಾರೆ.

ಬಿಎಸ್‌ವೈ ದಿಟ್ಟ ನಿರ್ಧಾರದ ಹಿಂದೇನಿದೆ?

ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ದೊರೆತು 303ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವೆ. ಇದಕ್ಕೆ ಪ್ರತಿಯೊಬ್ಬ ನಾಯಕ ಮತ್ತು ಕಾರ್ಯಕರ್ತನ ಶ್ರಮ ಕಾರಣ ಎಂದು ಶ್ಲಾಘಿಸಿದ್ದಾರೆ.

ಅಲ್ಲದೇ ರಾಜ್ಯದಲ್ಲೂ ಕೂಡ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಬೆನ್ನಲ್ಲೆ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಸಂಘಟನೆ, ಕಾರ್ಯ ವೈಖರಿಯಿಂದಲೇ 2014ರ ಲೋಕಸಭಾ ಚುನಾವಣೆಗಿಂತ ಹೆಚ್ಚು ಸ್ಥಾನ ಗೆಲ್ಲಲು ಸಹಾಯಕವಾಗಿದೆ. ಮುಂದಿನ ದಿನಗಳಲ್ಲೂ ಕೂಡ ಇದೇ ರೀತಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಅಶೋಕ ಅವರಿಗೆ ತಿಳಿಸಿದ್ದಾರೆ.