ತಮ್ಮ ಹೇಳಿಕೆಗೆ ಆಝಾದ್ ಕ್ಷಮೆಯಾಚಿಸಬೇಕೆಂದು ಬಿಜೆಪಿ ಸಚಿವರು ಹಾಗೂ ಸಂಸದರು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ, ದೇಶವನ್ನು ದುಸ್ಥಿತಿಗೆ ತಳ್ಳಿರುವ ಬಿಜೆಪಿ ಕ್ಷಮೆ ಯಾಚಿಸಬೇಕೇ ಹೊರತು ಕಾಂಗ್ರೆಸ್ ಪಕ್ಷವಲ್ಲ ಎಂದು ಹೇಳಿದ್ದಾರೆ.

ನವದೆಹಲಿ (ನ.17): ನೋಟು ನಿಷೇಧದ ಪರಿಣಾಮವನ್ನು ಉರಿ ದಾಳಿಗೆ ಹೋಲಿಸಿ ವಿವಾದ ಸೃಷ್ಟಿಸಿದ್ದ ಕಾಂಗ್ರೆಸ್ ನಾಯಕ ಗುಲಾಮ್ ನಬೀ ಆಝಾದ್ ತಮ್ಮ ಹೇಳಿಕೆಗಾಗಿ ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ.

ತಮ್ಮ ಹೇಳಿಕೆಗೆ ಆಝಾದ್ ಕ್ಷಮೆಯಾಚಿಸಬೇಕೆಂದು ಬಿಜೆಪಿ ಸಚಿವರು ಹಾಗೂ ಸಂಸದರು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ, ದೇಶವನ್ನು ದುಸ್ಥಿತಿಗೆ ತಳ್ಳಿರುವ ಬಿಜೆಪಿ ಕ್ಷಮೆ ಯಾಚಿಸಬೇಕೇ ಹೊರತು ಕಾಂಗ್ರೆಸ್ ಪಕ್ಷವಲ್ಲ ಎಂದು ಹೇಳಿದ್ದಾರೆ.

ನೋಟು ಅಪಮೌಲ್ಯೀಕರಣ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಆಝಾದ್,ಸರ್ಕಾರದ ತಪ್ಪು ಕ್ರಮದಿಂದ ಉರಿ ಭಯೋತ್ಪಾದಕರ ದಾಳಿಯಲ್ಲಿ ಸತ್ತವರಿಗಿಂತಲೂ ಹೆಚ್ಚು ಮಂದಿ ಸತ್ತಿದ್ದಾರೆ ಎಂದು ಹೇಳಿದ್ದರು.