ಬೆಂಗಳೂರು :  ಬೆಂಗಳೂರು ‘ಮಾಧ್ಯಮಗಳ ವರದಿಗಳಿಂದಲೇ ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳ್ಳುತ್ತಿದೆ ಎಂಬುದು ತಿಳಿಯುತ್ತಿದೆ. ಆಪರೇಷನ್ ಕಮಲ ಮಾಡುವುದಕ್ಕೆ ಯಾವುದೇ ಪ್ರಯತ್ನ ನಡೆಸುತ್ತಿಲ್ಲ.

ಒಂದು ವೇಳೆ ಅತಂತ್ರ ಪರಿಸ್ಥಿತಿ ಎದುರಾದರೆ ಸುಮ್ಮನೆ ಕುಳಿತುಕೊಳ್ಳಲು ನಾವೇನು ಸನ್ಯಾಸಿಗಳಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್- ಜೆಡಿಎಸ್ ಶಾಸಕರ ಅಸಮಾಧಾನದಿಂದ ರಾಜಕಾರಣ ದಲ್ಲಿ ಯಾವ ಕ್ಷಣದಲ್ಲಿ ಏನು ಬೇಕಾದರೂ ಸಂಭವಿಸಬಹುದು. ಇದರ ಬಗ್ಗೆ ಭವಿಷ್ಯ ಹೇಳಲು ಸಾಧ್ಯವಿಲ್ಲ. ಒಂದು ವೇಳೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿ ಅಸ್ಥಿರಗೊಂಡರೆ ಸರ್ಕಾರ ರಚನೆಗೆ ಬಿಜೆಪಿ ಸಿದ್ಧಗೊಳ್ಳಲಿದೆ ಎಂದರು.