2018ರಲ್ಲಿ ಯುವ ಮುಖಗಳಿಗೆ ಆಧ್ಯತೆ ಮೇರೆಗೆ ಬಿಜೆಪಿ ಅಭ್ಯರ್ಥಿಯಾಗಿ ಎಸ್. ಎಂ. ಕೃಷ್ಣ ಪುತ್ರಿ ಶಾಂಭವಿ, ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್'ಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಒಂದು ವೇಳೆ ನಿಶಾ ಯೋಗೇಶ್ವರ್ ಬಿಜೆಪಿ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ಕಣಕ್ಕಿಳಿದರೆ, ಮದ್ದೂರಿನಿಂದ ಸಿ.ಪಿ. ಯೋಗೇಶ್ವರ್ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
ಬೆಂಗಳೂರು(ಅ.23): 2018ರಲ್ಲಿ ಯುವ ಮುಖಗಳಿಗೆ ಆಧ್ಯತೆ ಮೇರೆಗೆ ಬಿಜೆಪಿ ಅಭ್ಯರ್ಥಿಯಾಗಿ ಎಸ್. ಎಂ. ಕೃಷ್ಣ ಪುತ್ರಿ ಶಾಂಭವಿ, ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್'ಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಒಂದು ವೇಳೆ ನಿಶಾ ಯೋಗೇಶ್ವರ್ ಬಿಜೆಪಿ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ಕಣಕ್ಕಿಳಿದರೆ, ಮದ್ದೂರಿನಿಂದ ಸಿ.ಪಿ. ಯೋಗೇಶ್ವರ್ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
ಶಾಂಭವಿ ಅವರಿಗೆ ಬೆಂಗಳೂರಿನ ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರದಿಂದ ಟಿಕೆಟ್ ಸಾಧ್ಯತೆ ಹೆಚ್ಚಾಗಿದೆ. ಆದರಿಂದ ಶಾಂಭವಿ ಬೆಂಗಳೂರಿನಿಂದ ಕಣಕ್ಕಿಳಿಯುವುದು ಖಚಿತವಾದರೆ ಬ್ಯಾಟರಾಯನಪುರ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಸಿ.ಪಿ. ಯೋಗೇಶ್ವರ್ ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಉಸ್ತುವಾರಿಯಾಗಲಿದ್ದಾರೆ. ಈ ಮೂಲಕ ಡಿ.ಕೆ. ಶಿವಕುಮಾರ್ ಮತ್ತು ಹೆಚ್. ಡಿ. ಕುಮಾರಸ್ವಾಮಿ ಪ್ರಭಾವ ತಗ್ಗಿಸಲು ಬಿಜೆಪಿ ಬಿಗ್ ಪ್ಲಾನ್ ನಡೆಸಿದೆ.
