ಬೆಂಗಳೂರು(ಜು.23): ರಾಜ್ಯ ಮೈತ್ರಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ, ಬಿಜೆಪಿ ಸರ್ಕಾರ ರಚನೆಯ ಕಸರತ್ತು ಶುರು ಮಾಡಿದೆ. ಮೂಲಗಳ ಪ್ರಕಾರ ನಾಳೆ(ಜು.24) ರಾಜ್ಯಪಾಲರ ಮುಂದೆ ಯಡಿಯೂರಪ್ಪ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.

ಗುರುವಾರ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಎಸ್ ಯಡಿಯೂರಪ್ಪ, ಸರ್ಕಾಶರ ರಚನೆಯ ಕುರಿತು ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.