ಬೆಂಗಳೂರು, [ಜ.06]: 2019ರ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ ಮಾಡಿದ್ದು, ಕೇಂದ್ರ ಸಚಿವ  ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಪ್ರಣಾಳಿಕೆ ಸಮಿತಿ ರಚನೆ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಸಮಿತಿ ಹಾಗೂ 2019 ಲೋಕಸಭಾ ಚುನಾವಣೆ ಪ್ರಚಾರ ಸಮಿತಿಗೆ ಒಟ್ಟ 41 ಜನರ ಪಟ್ಟಿ ಮಾಡಿ ಆದೇಶ ಹೊರಡಿಸಿದ್ದಾರೆ.

ಪ್ರಣಾಳಿಕೆ ಸಮಿತಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸಮಿತಿ ಅಧ್ಯಕ್ಷರಾಗಿದ್ದು, ಲೋಕಸಭಾ ಚುನಾವಣೆಯ ಪ್ರಚಾರ ಸಮಿತಿಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ನೇಮಿಸಿ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.

ಈ ಚುನಾವಣೆಯ ಪ್ರಚಾರ ಸಮಿತಿಗೆ ಕರ್ನಾಟಕದಿಂದ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸಾಮಾಜಿಕ ಸಂಘಟನೆಗಳ ಜೊತೆಗಿನ ಸಂಪರ್ಕ್ ಸಮಿತಿಯಲ್ಲಿ ಸದಾನಂದ ಗೌಡರಿಗೆ ಸ್ಥಾನ ನೀಡಲಾಗಿದೆ.