ನವದೆಹಲಿ: ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಕುಟುಂಬ ರಾಜಕಾರಣವನ್ನು ಬಿಜೆಪಿ ಕೊನೆಗೊಳಿಸುತ್ತದೆ ಎಂದು ಪಕ್ಷದ ಅಧ್ಯಕ್ಷ ಅಮಿತ್‌ ಶಾ ಗುಡುಗಿದ್ದಾರೆ.

ಈ ಮೂಲಕ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತವರು ಕ್ಷೇತ್ರದ ಮೇಲೆ ಬಿಜೆಪಿ ಕಣ್ಣಿಟ್ಟಿರುವ ಬಗ್ಗೆ ಬಹಿರಂಗವಾಗಿಯೇ ಸಂದೇಶ ರವಾನಿಸಿದ್ದಾರೆ.

ರಾಯ್‌ಬರೇಲಿಯಲ್ಲಿ ಶನಿವಾರ ಬಿಜೆಪಿ ರಾರ‍ಯಲಿ ಉದ್ದೇಶಿಸಿ ಮಾತನಾಡಿದ ಶಾ,‘ಭಾರತದ ಸ್ವಾತಂತ್ರ್ಯ ನಂತರ, ಇಲ್ಲಿ (ರಾಯ್‌ಬರೇಲಿ) ನಾವು ಬರೀ ಕುಟುಂಬ ರಾಜಕಾರಣ ನೋಡಿದ್ದೇವೆ. ಇಲ್ಲಿಂದಾಚೆಗೆ, ಕುಟುಂಬ ರಾಜಕಾರಣವನ್ನು ಕೊನೆಗೊಳಿಸುವುದಕ್ಕಾಗಿ ನಾವು ಅಭಿವೃದ್ಧಿ ರಾಜಕಾರಣ ಮಾತ್ರ ಮಾಡುತ್ತೇವೆ’ ಎಂದು ಶಾ ಹೇಳಿದರು.

ಈ ಪ್ರದೇಶ ಕಾಂಗ್ರೆಸ್‌ನ ಹಲವಾರು ನಾಯಕರನ್ನು ಆಯ್ಕೆ ಮಾಡಿದೆ. ಆದರೆ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಶಾ ತಿಳಿಸಿದರು.