ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿನಯ್ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ಬೆಂಗಳೂರು(ನ.27): ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿನಯ್ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ಮೈಸೂರು, ದಾವಣಗೆರೆ, ಮೈಸೂರು, ದಾವಣಗೆರೆ, ವಿಜಯಪುರ, ತುಮಕೂರು, ರಾಮನಗರ, ಬೆಳಗಾವಿ, ಯಾದಗಿರಿ, ಬಳ್ಳಾರಿ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆಯ ಕಾವು ತೀವ್ರವಾಗಿದೆ.

ಬಿಜೆಪಿಯ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.