ಸರ್ಕಾರದ ವಿರುದ್ಧ ಹರಿಹಾಯ್ದ ಬಿಜೆಪಿ ಮುಖಂಡರು, ಇದೊಂದು ಕೊಲೆಗಡುಕ ಸರ್ಕಾರ ಎಂದು ಆರೋಪಿಸಿದ್ದಾರೆ.ಈ ಸರ್ಕಾರಕ್ಕೆ ಕಣ್ಣು, ಕಿವಿ ಜ್ಞಾನ ಯಾವುದೂ ಇಲ್ಲ ಎಂದು ವ್ಯಂಗ್ಯವಾಡಿದ್ದರೆ
ಬೆಂಗಳೂರು (ಅ.19): ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ದಿನಪೂರ್ತಿ ಪ್ರತಿಭಟನೆ ನಡೆಸುತ್ತಿದೆ. ಆನಂದ್ ರಾವ್ ವೃತ್ತದಲ್ಲಿ ಧರಣಿ ನಡೆಸುತ್ತಿರುವ ಬಿಜೆಪಿ ನಾಯಕರು, ಕೂಡಲೇ ಆರೋಪಿಗಳನ್ನ ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಇದೇ ವೇಳೆ ಸರ್ಕಾರದ ವಿರುದ್ಧ ಹರಿಹಾಯ್ದ ಬಿಜೆಪಿ ಮುಖಂಡರು, ಇದೊಂದು ಕೊಲೆಗಡುಕ ಸರ್ಕಾರ ಎಂದು ಆರೋಪಿಸಿದ್ದಾರೆ.ಈ ಸರ್ಕಾರಕ್ಕೆ ಕಣ್ಣು, ಕಿವಿ ಜ್ಞಾನ ಯಾವುದೂ ಇಲ್ಲ ಎಂದು ವ್ಯಂಗ್ಯವಾಡಿದ್ದರೆ.
ರುದ್ರೇಶ್ ಕೊಲೆಗೆ ಸಿಎಂ ಸಿದ್ದರಾಮಯ್ಯನವರೇ ಹೊಣೆ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಶೋಭ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಸಂಸದೆ ಶೋಭ ಕರಂದ್ಲಾಜೆ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ಅರವಿಂದ ಲಿಂಬಾವಳಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಹಲವರ ಉಪಸ್ಥಿತರಿದ್ದಾರೆ.
