Asianet Suvarna News Asianet Suvarna News

ಶನಿವಾರ ಬಿಜೆಪಿ 2ನೇ ಟಿಕೆಟ್‌ ಪಟ್ಟಿ: ಬಿಎಸ್‌ವೈ

ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿಯ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

BJP release second list for Karnataka assembly poll saturday

ಬೆಂಗಳೂರು : ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿಯ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 72 ಅಭ್ಯರ್ಥಿಗಳ ಮೊದಲ ಪಟ್ಟಿಬಿಡುಗಡೆ ಮಾಡಲಾಗಿದೆ. ಈ ಪೈಕಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಾಗುವುದು ಎಂದರು.

ಎರಡನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಅದು ಸುಮಾರು 70ರಿಂದ 80 ಕ್ಷೇತ್ರಗಳ ಅಭ್ಯರ್ಥಿಗಳನ್ನು ಒಳ ಗೊಂಡಿರುತ್ತದೆ. ನಂತರ ಮೂರನೇ ಹಂತದ ಪಟ್ಟಿ ಬಿಡುಗಡೆಗೊಳಿಸ ಲಾಗುವುದು ಎಂದರು.

ಈ ನಡುವೆ ಕಾಂಗ್ರೆಸ್ಸಿನ ಮೊದಲ ಪಟ್ಟಿಬಿಡುಗಡೆ ನಂತರ ಪಕ್ಷದ ಎರಡನೇ ಹಂತದ ಪಟ್ಟಿಬಿಡುಗಡೆ ಮಾಡುವುದು ಉತ್ತಮ ಎಂಬ ಅಭಿಪ್ರಾಯವೂ ಪಕ್ಷದಲ್ಲಿ ವ್ಯಕ್ತವಾಗಿದೆ.

Follow Us:
Download App:
  • android
  • ios