ಇವರೇ ಮುಂದಿನ ಬಾರಿಯೂ ಕೂಡ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಸಿಎಂ ವಸುಂಧರಾ ರಾಜೇ ಅವರೇ ಮುಂದಿನ ಮುಖ್ಯ ಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಘೋಷಿಸಿದ್ದಾರೆ. 

ಜೈಪುರ: ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಸಿಎಂ ವಸುಂಧರಾ ರಾಜೇ ಅವರೇ ಮುಂದಿನ ಮುಖ್ಯ ಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಘೋಷಿಸಿದ್ದಾರೆ. 

ಇತ್ತೀಚೆಗಿನ ದಿನಗಳಲ್ಲಿ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯಿದ್ದಾಗ್ಯೂ, ವಿವಾದಗಳ ಹೊರತಾಗಿಯೂ ವಸುಂಧರಾ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಲು ಶಾ ನಿರ್ಧರಿಸಿದ್ದಾರೆ. 

ರಾಜಸ್ಥಾನದಲ್ಲಿ ಶುಕ್ರವಾರ ಆರಂಭಗೊಂಡಿದ್ದ ಎರಡು ದಿನಗಳ ಕಾರ್ಯಕಾರಿ ಸಮಿತಿ ಸಭೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾದ ಅವರು ಈ ಮಾತುಗಳನ್ನಾಡಿದ್ದಾರೆ.