ನವದೆಹಲಿ(ಜ.25): ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಹಹಿರಿಯ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಸ್ಪರ್ಧಿಸಲಿದ್ದಾರೆಯೇ ಎಂಬ ಕುತೂಹಲ ಇದೀಗ ಬಿಜೆಪಿ ಪಾಳೆಯದಲ್ಲಿ ಮೂಡಿದೆ.

91 ವರ್ಷದ ಅಡ್ವಾಣಿ ಮತ್ತು 84 ವರ್ಷದ ಜೋಷಿ ಈ ಬಾರಿಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ನಿರ್ಧಾರ ಕೈಗೊಳ್ಳಬೇಕಿದೆ. ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಎಂಬ ನಿರ್ಧಾರ ಕೈಗೊಳ್ಳುವ ಅಧಿಕಾರ ಅವರಿಗೇ ನೀಡಲಾಗಿದೆ ಎಂದು ಹೇಳಿದೆ.

ಈ ಇಬ್ಬರೂ ಹಿರಿಯ ನಾಯಕರು ಏನೇ ನಿರ್ಧಾರ ಕೈಗೊಂಡರೂ ಅದನ್ನು ಬಿಜೆಪಿ ಗೌರವಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 2014ರಲ್ಲಿ ಅಡ್ವಾಣಿ ಗುಜರಾತ್ ನ ಗಾಂಧಿನಗರದಿಂದ ಮತ್ತು ಮುರಳಿ ಮನೋಹರ್ ಜೋಷಿ ಉತ್ತರಪ್ರದೇಶದ ಕಾನ್ಪುರದಿಂದ ಸ್ಪರ್ಧಿಸಿ ವಿಜೇತರಾಗಿದ್ದರು.