ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಆರ್’ಎಸ್’ಎಸ್ ಹಾಗೂ ಬಿಜೆಪಿಯೇ ಕಾರಣ ಎಂದು ತಳುಕು ಹಾಕಿದ ಖ್ಯಾತ ಇತಿಹಾಸಕಾರ ರಾಮಚಂದ್ರಾ ಗುಹಾರವರಿಗೆ ಬಿಜೆಪಿ ಲೀಗಲ್ ನೋಟಿಸ್ ಕಳುಹಿಸಿದೆ.

ನವದೆಹಲಿ (ಸೆ.11): ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಆರ್’ಎಸ್’ಎಸ್ ಹಾಗೂ ಬಿಜೆಪಿಯೇ ಕಾರಣ ಎಂದು ತಳುಕು ಹಾಕಿದ ಖ್ಯಾತ ಇತಿಹಾಸಕಾರ ರಾಮಚಂದ್ರಾ ಗುಹಾರವರಿಗೆ ಬಿಜೆಪಿ ಲೀಗಲ್ ನೋಟಿಸ್ ಕಳುಹಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗೌರಿ ಲಂಕೇಶ್ ಹತ್ಯೆಯಾದಾಗ ರಾಮಚಂದ್ರ ಗುಹಾ ಹತ್ಯೆಗೆ ಸಂಘ ಪರಿವಾರದವರೇ ಕಾರಣ ಎಂದು ನೇರವಾದ ಆರೋಪ ಹೊರಿಸಿದ್ದರು. ಗೋವಿಂದ ಪನ್ಸಾರೆ, ದಾಬೋಲ್ಕರ್, ಕಲ್ಬುರ್ಗಿಯವರ ಹತ್ಯೆ ಮಾಡಿದಂತೆ ಗೌರಿ ಲಂಕೇಶ್’ರವರನ್ನು ಸಂಘ ಪರಿವಾರದವರೇ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಕೇಂದ್ರ ಸರ್ಕಾರದ ಆಡಳಿತ ಜನರಲ್ಲಿ ದ್ವೇಷ, ಅಸಹಿಷ್ಣುತೆ ಭಾವನೆಯನ್ನು ಬಿತ್ತುತ್ತಿದೆ ಎಂದಿದ್ದರು. ಗುಹಾರವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ಯುವ ಮೋರ್ಚಾ ಲೀಗಲ್ ನೋಟಿಸ್ ಕಳುಹಿಸಿದೆ.

ಗುಹಾರವರು ಬಿಜೆಪಿ ಹಾಗೂ ಮೋದಿ ಸರ್ಕಾರವನ್ನು ಸದಾ ಟೀಕಿಸುತ್ತಿದ್ದರು. ಹಾಗಾಗಿ ಇವರಿಗೆ ಬೆದರಿಕಾ ಈ ಮೇಲ್’ಗಳನ್ನು ಕಳುಹಿಸಲಾಗಿತ್ತು ಎಂದು ರಾಮಚಂದ್ರ ಗುಹಾ ಹೇಳಿದ್ದಾರೆ.